Breaking News

ಸಿದ್ದರಾಮಯ್ಯಗೆ ಸಾವರ್ಕರ್ ಭಾವಚಿತ್ರ ನೀಡಿ, ಕಪ್ಪು ಬಾವುಟದ ಸ್ವಾಗತ

Spread the love

ಮಡಿಕೇರಿ: ಒಂದು ದಿನದ ಕೊಡಗು ಜಿಲ್ಲಾ ಪ್ರವಾಸಕ್ಕಾಗಿ ಕೊಡಗಿಗೆ ಆಗಮಿಸಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಕೊಡಗಿನ ಗಡಿ ಭಾಗದ ತಿತಿಮತಿಯಲ್ಲಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸಾವರ್ಕರ್ ಭಾವಚಿತ್ರವನ್ನು ಕಾರಿನಲ್ಲಿ ಕುಳಿತಿದ್ದ ಸಿದ್ಧರಾಮಯ್ಯ ಮಡಿಲಲ್ಲಿಟ್ಟರಲ್ಲದೇ ಕಪ್ಫುಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಸಿದ್ಧರಾಮಯ್ಯ ಘೋಷಣೆ ಕೂಗಿದ ಘಟನೆ ಗುರುವಾರ ನಡೆದಿದೆ.

 

ರಾಜ್ಯದಲ್ಲಿ ಮತಾಂಧ ಟಿಪ್ಪುವಿನ ಜಯಂತಿ ಆಚರಣೆ ಜಾರಿಗೆ ತಂದು ಅಮಾಯಕರ ಕೊಲೆಗೆ ಕಾರಣರಾದ ಟಿಪ್ಪು ಭಕ್ತ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡುವುದರಿಂದ ಮತ್ತೆ ಕೊಡಗಿನ ಶಾಂತಿ ಭಂಗವಾಗಲಿದ್ದು, ಜೊತೆಗೆ ಕೊಡವರನ್ನು ಗೋಮಾಂಸ ಭಕ್ಷಕರೆಂದು ಬಿಂಬಿಸಿರುವ ಹಿಂದು ವಿರೋಧಿ ಸಿದ್ಧರಾಮಯ್ಯ ಕೊಡಗಿಗೆ ಕಾಲಿಡಲು ಅನರ್ಹರಾಗಿದ್ದಾರೆಂದು ಬಿ.ಜೆ.ಪಿ. ಯುವ ಮೋರ್ಚಾ ಜಿಲ್ಲಾಧ್ಯಕ್ಷ ದರ್ಶನ್ ಜೋಯಪ್ಪ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.ಈ ಸಂದರ್ಭ ಪೋಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ, ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿ, ಸಿದ್ಧರಾಮಯ್ಯರ ವಾಹನ ಮುಂದೆ ಚಲಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ವರದಿ ತಿಳಿಸಿದೆ


Spread the love

About Laxminews 24x7

Check Also

ನಮಗೆ ಇ.ಡಿ ಸಮನ್ಸ್ ಮೂಲಕ ಕಿರುಕುಳ ನೀಡಲಾಗುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್

Spread the loveಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಜಾರಿ ನಿರ್ದೇಶನಾಲಯ (ಇ.ಡಿ) ಸಮನ್ಸ್ ನೀಡಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ