Breaking News

ಮಗನಿಂದಲೇ ತಂದೆಯ ಬರ್ಬರ ಹತ್ಯೆ

Spread the love

ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಮಗನಿಂದಲೇ ತಂದೆಯ ಬರ್ಬರ ಹತ್ಯೆ ನಡೆದಿರುವ ಘಟನೆ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಬುಧವಾರ ನಡೆದಿದೆ.

ಹುಲಕೊಟಿ ಗ್ರಾಮದ 58 ವರ್ಷದ ಗಣೇಶ ಅಡಿವೆಪ್ಪ ಚಿಕ್ಕನಟ್ಟಿ ಕೊಲೆಯಾದವರು. ವಿಜಯ ಗಣೇಶ ಚಿಕ್ಕನಟ್ಟಿ ಕೊಲೆ ಮಾಡಿದ ಮಗ.

ಕಳೆದ ಕೆಲ ವರ್ಷಗಳಿಂದ ಗಣೇಶ ಚಿಕ್ಕನಟ್ಟಿ, ಹೆಂಡತಿ ಹಾಗೂ ಮಗನಿಗೆ ನಿತ್ಯ ಕಿರುಕುಳ ನೀಡಿ, ಮನೆಯಲ್ಲಿ ಜಗಳವಾಡುತ್ತಿದ್ದ ಎಂದು ತಿಳಿದು ಬಂದಿದೆ.

ಎಂದಿನಂತೆ ತಂದೆ ಗಣೇಶ ಮನೆಯಲ್ಲಿ ತಾಯಿಗೆ ಕಿರುಕುಳ ನೀಡುತ್ತಿದ್ದನ್ನು ಗಮನಿಸಿದ ಮಗ, ತಂದೆ ಮಲಗಿರುವ ವೇಳೆ ಕೊಡಲಿಯಿಂದ ಬಲವಾಗಿ ಕುತ್ತಿಗೆಗೆ ಹೊಡೆದಿದ್ದಾನೆ. ಪರಿಣಾಮ ಗಣೇಶ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಕೊಲೆ ನಂತರ ವಿಜಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾನೆ.


Spread the love

About Laxminews 24x7

Check Also

ರಾಜ್ಯದ ಹಲವೆಡೆ ವರುಣನ ಅಬ್ಬರ – ಬಿಸಿಲ ಬೇಗೆಗೆ ಬೆಂದಿದ್ದ ಭೂಮಿಗೆ ತಂಪೆರೆದ ಆಲಿಕಲ್ಲು ಮಳೆ

Spread the loveಬೆಂಗಳೂರು: ರಾಜ್ಯದ ಹಲವೆಡೆ ವರುಣನ ಅಬ್ಬರ ಜೋರಾಗಿದ್ದು, ಕೊಡಗು, ಹಾಸನ ಸೇರಿದಂತೆ ಹಲವೆಡೆ ಕೆಲ ಜಿಲ್ಲೆಗಳಲ್ಲಿ ಮಳೆರಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ