Breaking News

ಅನೈತಿಕ ಸಂಬಂಧ: ಸವದತ್ತಿಯಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ

Spread the love

ಸವದತ್ತಿ: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಮಾರಕಾಸ್ತ್ರದಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಲ್ಲಿನ ರಾಮಾಪೂರ ಸೈಟಿನಲ್ಲಿ ಗುರುವಾರ ನಡೆದಿದೆ.

ಶಬಾನಾ (28) ಕೊಲೆಗೀಡಾದ ಮಹಿಳೆ. ಆರೋಪಿ ಮೆಹಬೂಬಸಾಬ ಗರೀಬಸಾಬ ಗೊರವನಕೊಳ್ಳ (30) ತನ್ನ ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ.

ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ.

ಸ್ಥಳಕ್ಕೆ ಪಿಐ ಕರುಣೇಶಗೌಡ ಜೆ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿಯೊಂದಿಗೆ ಕೃತ್ಯಕ್ಕೆ ಬಳಿಸಿದ ಮಾರಕಾಸ್ತ್ರವನ್ನು ವಶ ಪಡಿಸಿಕೊಳ್ಳಲಾಗಿದೆ.

ಆಗಾಗ ಪತಿ ಪತ್ನಿ ನಡುವೆ ಕಲಹ ಉಂಟಾಗುತ್ತಿತ್ತು. ಕಳೆದ 10 ವರ್ಷಗಳ ಹಿಂದೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಹತ್ಯೆಗೀಡಾದ ಶಬಾನಾ ರಾಮಾಪೂರ ಸೈಟಿನಲ್ಲಿ ಬಾಡಿಗೆ ಮನೆಯಲ್ಲಿ ಮಕ್ಕಳೊಂದಿಗೆ ವಾಸವಾಗಿದ್ದಳು. ಒಮ್ಮೆಲೆ ತಾರಕಕ್ಕೇರಿದ ಕಲಹ ಕೊಲೆಯಲ್ಲಿ ಮುಕ್ತಾಯವಾಗಿದೆ.


Spread the love

About Laxminews 24x7

Check Also

ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ.

Spread the love ಹುಕ್ಕೇರಿ : ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ ವಿಜಯಶಾಲಿಗಳಾಗಿ – ಇಕ್ಬಾಲ್ ಪೀರಜಾದೆ. ವಿದ್ಯಾರ್ಥಿಗಳು ಸತತ ಪ್ರಯತ್ನದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ