Breaking News

ಬೆಳಗಾವಿಯ ಐಟಿಬಿಪಿ ಶಿಬಿರದಲ್ಲಿ 2 ಎಕೆ-47 ರೈಫಲ್‍ಗಳು ನಾಪತ್ತೆ:

Spread the love

ಚೀನಾ ಗಡಿ ಕಾವಲು ಜವಾಬ್ದಾರಿ ಹೊತ್ತಿರುವ ಐಟಿಬಿಪಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ ಯೋಧರಿಗೆ ಸೇರಿದ ಎರಡು ಎಕೆ-47 ರೈಫಲ್‍ಗಳು ಕಳುವಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ತಾಲೂಕಿನ ಹಾಲಬಾವಿಯಲ್ಲಿರುವ ಐಟಿಬಿಪಿ ಶಿಬಿರದಲ್ಲಿ ನಕ್ಸಲ್ ನಿಗ್ರಹ ತರಬೇತಿ ನಡೆಯುತ್ತಿದೆ. ತರಬೇತಿಗೆಂದು ಮಧುರೈನಿಂದ ಬಂದಿರುವ ಐಟಿಬಿಪಿ 45ನೇ ಬಟಾಲಿಯನ್ ಯೋಧರಾದ ರಾಜೇಶ್‍ಕುಮಾರ್, ಸಂದೀಪ್ ಮೀನಾ ಅವರಿಗೆ ಸೇರಿದ ಎಕೆ-47 ರೈಫಲ್‍ಗಳು ಕಳುವಾಗಿವೆ.

ಆಗಸ್ಟ್ 17ರಂದು ರಾತ್ರಿ ಮಲಗುವಾಗ ರೈಫಲ್‍ಗಳನ್ನು ವಾಡಿಕೆಯಂತೆ ಭದ್ರತೆಯಲ್ಲಿಯೇ ಇರಿಸಲಾಗಿತ್ತು. ಆದರೆ ಬೆಳಿಗ್ಗೆ ಎದ್ದು ನೋಡುವಷ್ಟರಲ್ಲಿ ರೈಫಲ್‍ಗಳು ನಾಪತ್ತೆಯಾಗಿವೆ. ವಿಷಯ ತಿಳಿಯುತ್ತಿದ್ದಂತೆ ಉನ್ನತ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಕಟ್ಟೆಚ್ಚರ ಘೋಷಿಸಿದ್ದಾರೆ. ಪೊಲೀಸರಿಂದ ವ್ಯಾಪಕ ಶೋಧಕಾರ್ಯ ಆರಂಭವಾಗಿದೆ.ಇನ್ನು ಅಪರಾಧ ವಿಭಾಗದ ಡಿಸಿಪಿ ಪಿ.ವಿ.ಸ್ನೇಹಾ ನೇತೃತ್ವದಲ್ಲಿ ವಿಶೇಷ ತಂಡ ರಚಿಸಿ ಎಕೆ-47 ರೈಫಲ್ ಪತ್ತೆಗೆ ಶೋಧ ನಡೆಸಲಾಗುತ್ತಿದ್ದು. ಕಾಕತಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. 


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ