ಬಾಗಲಕೋಟೆ : ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ ಖಂಡಿಸಿ ಅವರು ಪ್ರತಿನಿಧಿಸುತ್ತಿರುವ ಕ್ಷೇತ್ರ ಬಾದಾಮಿಯಲ್ಲಿ ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರಿಂದ ಭಾರಿ ಪ್ರತಿಭಟನೆ ನಡೆಸಲಾಗಿದೆ.
ಬಾದಾಮಿ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸಿದ್ದರಾಮಯ್ಯ ಅಭಿಮಾನಿಗಳು ರಸ್ತೆ ತಡೆದು, ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ವೇಳೆ ಟ್ರಾಫಿಕ್ ಜಾಮ್ ಆಗಿ ನೂರಾರು ವಾಹನಗಳು ಸಾಲುಗಟ್ಟಿ ನಿಲ್ಲಬೇಕಾಯಿತು.
ಬೃಹತ್ ಪ್ರತಿಭಟನಾ ರ‍್ಯಾಲಿ ವೇಳೆ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಈ ವೇಳೆ ರಸ್ತೆಯಲ್ಲಿ ಉರುಳಾಡಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ಮತ್ತು ಗೃಹ ಸಚಿವ ವೈಫಲ್ಯದಿಂದ ಘಟನೆ ನಡೆದಿದೆ, ತಪ್ಪಿತಸ್ಥರ ವಿರುದ್ಧ ಕೂಡಲೇ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.
Laxmi News 24×7