ತುಮಕೂರು: ರಾಜ್ಯ ಸರಕಾರದ ಪ್ರಭಾವಿ ಸಚಿವ ಜೆ.ಸಿ.ಮಾಧುಸ್ವಾಮಿ ಬಗ್ಗೆ ಕಾಂಗ್ರೆಸ್ ಮಾಜಿ ಶಾಸಕ ಕೆ.ಎನ್.ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದು, ಮಾಧುಸ್ವಾಮಿಗೆ ಕಾಂಗ್ರೆಸ್ ಮೇಲೆ ಒಲವಿದೆ. ಪಕ್ಷದ ಟಿಕೆಟ್ ಕೊಡಿಸುವಂತೆ ನನಗೆ ಹೇಳಿದ್ದರು ಎಂದು ಹೇಳಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಮಾಧುಸ್ವಾಮಿ ತಿಪಟೂರು ಕ್ಷೇತ್ರದಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಕಾಂಗ್ರೆಸ್‌ಗೆ ಬಂದರೆ ಸದಾ ಸ್ವಾಗತ ಬಯಸುತ್ತೇವೆ ಎಂದು ನುಡಿದರು.
ಸಚಿವ ಜೆ.ಸಿ.ಮಾಧುಸ್ವಾಮಿ ಕಾಂಗ್ರೆಸ್ ಸೇರುತ್ತಾರೋ ಇಲ್ಲವೋ ಗೊತ್ತಿಲ್ಲ. ಆದರೆ, ಮಧ್ಯಸ್ಥಿಕೆದಾರರಿಂದ ಕಾಂಗ್ರೆಸ್ ಸೇರಲು ಬಯಸಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.