Breaking News

ಗೋಕಾಕದಲ್ಲಿ ರಾಯಣ್ಣ ಭಾವಚಿತ್ರ ಹರಿದ ಕಿಡಿಗೇಡಿಗಳು

Spread the love

ಬೆಳಗಾವಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಗೋಕಾಕ ತಾಲೂಕಿನ ‌ಖನಗಾಂವ ಗ್ರಾಮದಲ್ಲಿ ನಡೆದಿದೆ. ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ‌ಕ್ರಮವಾಗಿ ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ‌.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಖನಗಾಂವ ಗ್ರಾಮದಲ್ಲಿ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಭಾವಚಿತ್ರವನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ. ಗ್ರಾಮದ ರಸ್ತೆಗೆ ರಾಯಣ್ಣ ಸರ್ಕಲ್ ಎಂದು ನಾಮಕರಣ ಮಾಡಲಾಗಿತ್ತು. ನಾಮಕರಣ ಮಾಡಿ ರಾಯಣ್ಣ ಭಾವಚಿತ್ರದ ಫ್ಲೆಕ್ಸ್ ಬೋರ್ಡ್ ಹಾಕಲಾಗಿತ್ತು. ಈ ಬೋರ್ಡ್‌ನಲ್ಲಿದ್ದ ಸಂಗೊಳ್ಳಿ ರಾಯಣ್ಣ ಭಾವಚಿತ್ರವನ್ನು ಯಾರೋ ಕಿಡಿಗೇಡಿಗಳು ತಡರಾತ್ರಿ‌ ಹರಿದು ವಿಕೃತಿ ಮೆರೆದಿದ್ದಾರೆ.

ಕಿಡಿಗೇಡಿಗಳ ಕೃತ್ಯವನ್ನು ಖಂಡಿಸಿ ಗ್ರಾಮದಲ್ಲಿ ರಾಯಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ. ಟಯರ್‌ಗೆ ಬೆಂಕಿ ಹಚ್ಚಿ ರಾಯಣ್ಣ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣವಿದೆ. ಗೋಕಾಕ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಗೋಕಾಕ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಗಡಿ ವಿವಾದದಿಂದಾಗಿ ಮತ್ತೆ ಮಹಾರಾಷ್ಟ್ರ ಅಲರ್ಟ್

Spread the loveಬೆಳಗಾವಿ : ಗಡಿ ಸಚಿವರಾಗಿ ಹೆಚ್. ಕೆ. ಪಾಟೀಲ್ ಅವರನ್ನು ಕರ್ನಾಟಕ ಸರ್ಕಾರ ನೇಮಿಸುತ್ತಿದ್ದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ