Breaking News

ನೀವು ಸುಟ್ಟಿದ್ದು ಭಾವಚಿತ್ರವಲ್ಲ ಭಾರತ ಮಾತೆ‌ಯನ್ನು.. ಮುತಾಲಿಕ್​ ಆಕ್ರೋಶ

Spread the love

ಧಾರವಾಡ : ಧಾರವಾಡದಲ್ಲಿ ಸಾವರ್ಕರ್ ಫೋಟೋ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಪ್ರತಿಕ್ರಿಯಿಸಿದ್ದಾರೆ. ಸಾವರ್ಕರ್ ಭಾವಚಿತ್ರ ಸುಟ್ಟು ಹಾಕಿದ್ದು ಹೇಯ ಕೃತ್ಯ, ಇದು ದೇಶದ್ರೋಹಿ‌ ಕೃತ್ಯ. ನೀವು ಸುಟ್ಟಿದ್ದು ಭಾವಚಿತ್ರವಲ್ಲ, ಭಾರತ ಮಾತೆ‌ಯನ್ನು ಸುಡುತ್ತಿದ್ದೀರಿ ಎಂದು ಮುತಾಲಿಕ್​ ಆಕ್ರೋಶ ವ್ಯಕ್ತಪಡಿಸಿದರು.

ಈ ಕುರಿತು ಮಾತನಾಡಿದ ಅವರು, ಸಾವರ್ಕರ್ ಅರ್ಧ ಜೀವನ ಜೈಲಿನಲ್ಲಿ ಕಳೆದವರು ನಿಮಗೆ ದೇಶಭಕ್ತಿ ಇಲ್ಲ. ನಿಮಗೆ ಸಿದ್ದರಾಮಯ್ಯ ಬೇಕು. ನಿಮ್ಮ ಉದ್ದೇಶ ಏನು? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಅದು ತಪ್ಪು ಎಂದು ಎಲ್ಲರೂ ಹೇಳುತಿದ್ದಾರೆ. ಇಂತ‌ಹ ಸಾವರ್ಕರ್‌ಗೆ ಅಪಮಾನ ಮಾಡಿದ್ದು‌ ಸರಿಯಲ್ಲ. ನೀವು ನಾಲಾಯಕ್‌, ಅಯೋಗ್ಯರು ಈ ಕೂಡಲೇ ಕ್ಷಮೆ ಕೇಳಬೇಕು. ತಪ್ಪಾಯ್ತು ಎಂದು ಭಾರತ ಮಾತೆಗೆ ಹೇಳಬೇಕು. ಇಂದಿರಾ ಗಾಂಧಿಯವರೇ ಸಾರ್ವಕರ್ ಶ್ರೇಷ್ಠ ದೇಶಭಕ್ತ ಎಂದಿದ್ದರು. ಭಾವಚಿತ್ರದ ಅಂಚೆ ಚೀಟಿ ಬಿಡುಗಡೆ ಮಾಡಿದ್ದಾರೆ. ಆದರೆ ನೀವು ಮಾಡಿದ್ದು ತಪ್ಪು. ಕ್ಷಮೆ ಕೇಳಬೇಕು. ಇಲ್ಲದಿದ್ದಲ್ಲಿ ಕಾಂಗ್ರೆಸ್ ಅಧ್ಯಕ್ಷರ ಮನೆ ಮುಂದೆ ಧರಣಿ ಕುಳಿತುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ