Breaking News

ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳಿಗೆ ಬೆಂಕಿ

Spread the love

ಮಂಗಳೂರು: ಚಾರ್ಜಿಗೆ ಇಟ್ಟಿದ್ದ ಎಲೆಕ್ಟ್ರಿಕ್‌ ಸ್ಕೂಟರ್‌ಗಳು ಬೆಂಕಿಗಾಹುತಿಯಾದ ಘಟನೆ ನಗರದ ಬೋಳೂರಿನಲ್ಲಿ ಶನಿವಾರ ಸಂಭವಿಸಿದೆ.

ಘಟನೆಯಲ್ಲಿ 2 ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಮತ್ತೆರಡು ಸ್ಕೂಟರ್‌ಗಳಿಗೆ ಭಾಗಶಃ ಹಾನಿಯಾಗಿದೆ.

ಹಾಲಿನ ವ್ಯಾಪಾರ ಮಾಡುವ ಹರೇಕೃಷ್ಣ ಅವರಿಗೆ ಸೇರಿದ ನಾಲ್ಕು ಸ್ಕೂಟರ್‌ಗಳನ್ನು ಬೋಳೂರಿನ ಹಾಲಿನ ಬೂತ್‌ ಬಳಿ ಶನಿವಾರ ಬೆಳಗ್ಗೆ 10.30ರ ಸುಮಾರಿಗೆ ಚಾರ್ಜಿಗೆ ಇಡಲಾಗಿತ್ತು. ಮಧ್ಯಾಹ್ನದ ವೇಳೆಗೆ ಸ್ಕೂಟರ್‌ಗಳಿಗೆ ಬೆಂಕಿ ಹತ್ತಿಕೊಂಡಿತ್ತು. ಪರಿಣಾಮ ಎರಡು ಸ್ಕೂಟರ್‌ಗಳು ಸಂಪೂರ್ಣವಾಗಿ ಸುಟ್ಟು ಹೋಗಿವೆ. ಸ್ಥಳೀಯರ ಪ್ರಯತ್ನದಿಂದಾಗಿ ಇನ್ನೆರಡು ಸ್ಕೂಟರ್‌ಗಳನ್ನು ದೂರಕ್ಕೆ ತರಲಾಯಿತು. ಅಷ್ಟರಲ್ಲೇ ಅವುಗಳಿಗೂ ಭಾಗಶಃ ಹಾನಿಯಾಗಿದೆ.

4 ಲಕ್ಷ ರೂ. ನಷ್ಟ
ಸ್ಕೂಟರ್‌ಗಳು ಬೆಂಕಿಗಾಹುತಿ ಆಗಿರುವುದರಿಂದ ಒಟ್ಟು ಅಂದಾಜು 4 ಲ.ರೂ. ನಷ್ಟ ಸಂಭವಿಸಿದೆ ಎನ್ನಲಾಗಿದೆ. ಪಾಂಡೇಶ್ವರ ಅಗ್ನಿಶಾಮಕ ಠಾಣೆಯವರು ಸ್ಥಳಕ್ಕೆ ತೆರಳಿ ಕಾರ್ಯಾಚರಣೆ ನಡೆಸಿದರು. ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ