Breaking News

ಎಸ್​ಟಿ ಮೀಸಲಾತಿ ಹೆಚ್ಚಳಕ್ಕಾಗಿ ಕಳೆದ 6 ತಿಂಗಳಿಂದ ಪ್ರತಿಭಟನೆ ನಡೆಸುತ್ತಿರುವ ಪ್ರಸನ್ನಾನಂದ ಸ್ವಾಮೀಜಿ ಅವರನ್ನು ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಭೇಟಿ ಮಾಡಿ, ಕಾನೂನಾತ್ಮಕ ನೆರವು ನೀಡುವುದಾಗಿ ಭರವಸೆ

Spread the love

ಬೆಂಗಳೂರು: ಪರಿಶಿಷ್ಟ ಪಂಗಡ(ಎಸ್​ಟಿ) ಸಮುದಾಯದ ಮೀಸಲಾತಿ ಹೆಚ್ಚಳ ಕುರಿತು ನ್ಯಾ.ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೊಳಿಸುವ ನಿಟ್ಟಿನಲ್ಲಿ ಕಾನೂನಾತ್ಮಕ ಸಹಕಾರ ನೀಡುವುದಾಗಿ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.

ಕಳೆದ ಆರು ತಿಂಗಳಿಂದ ನಗರದ ಫ್ರೀಡಂ ಪಾರ್ಕ್‌ನಲ್ಲಿ ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನಡೆಸುತ್ತಿರುವ ಧರಣಿ ಸತ್ಯಾಗ್ರಹದ ಸ್ಥಳಕ್ಕೆ ಭೇಟಿ ನೀಡಿದ ಸ್ವಾಮೀಜಿ ಆರೋಗ್ಯ ವಿಚಾರಿಸಿದರು. ಬಳಿಕ ಮಾತನಾಡಿದ ಅವರು, ಶೇ.3 ರಿಂದ ಶೇ.7.5 ರಷ್ಟು ಎಸ್.ಟಿ ಸಮುದಾಯದ ಮೀಸಲಾತಿ ಹೆಚ್ಚಳ, ನಾಗಮೋಹನ್ ದಾಸ್ ವರದಿ ಜಾರಿಗೆ ಆಗ್ರಹಿಸಿ ಪ್ರಸನ್ನಾನಂದ ಸ್ವಾಮೀಜಿಯವರು ಧರಣಿ ನಡೆಸುತ್ತಿದ್ದಾರೆ. ಮೀಸಲಾತಿ ಹೆಚ್ಚಳ ಕುರಿತಂತೆ ಕಾನೂನಾತ್ಮಕವಾಗಿ ಸಹಕಾರ ನೀಡಲು ಸಿದ್ಧ ಎಂದು ಭರವಸೆ ನೀಡಿದರು.

ಎಸ್.ಟಿ ಮೀಸಲಾತಿ ಹೆಚ್ಚಿಸಲು ಕೆಲವು ಕಾನೂನಿನ ತೊಡಕುಗಳಿವೆ. ಅಡ್ಡಿಗಳನ್ನು ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ಮಟ್ಟದಲ್ಲಿ ಸಹಕಾರ ನೀಡಲಾಗುವುದು ಎಂದು ತಿಳಿಸಿ, ಧರಣಿ ಕೈ ಬಿಡುವಂತೆ ಪ್ರಸನ್ನಾನಂದ ಸ್ವಾಮೀಜಿ ಅವರಲ್ಲಿ ಸಚಿವ ಪ್ರಲ್ಹಾದ್ ಜೋಶಿ ಮನವಿ ಮಾಡಿದರು.


Spread the love

About Laxminews 24x7

Check Also

ಸಿಎಂ ಹುದ್ದೆಯ ರೇಸಿನಿಂದ ಹಿಂದೆ ಸರಿದವರು

Spread the love ಕಳೆದ ವಾರ ವಿದಾನಮಂಡಲ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಕುತೂಹಲಕಾರಿ ವಿಷಯವೊಂದು ಹೊರಬಿತ್ತು.ಅದರ ಪ್ರಕಾರ ಕರ್ನಾಟಕದಲ್ಲಿ ಮತ್ತೊಮ್ಮೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ