ಮೈಸೂರು: ಯುವತಿಯೊಬ್ಬಳು ಯುವಕನಿಗೆ ವಿಡಿಯೋ ಕಾಲ್ ಮಾಡಿ ಬ್ಲ್ಯಾಕ್ ಮೇಲ್ ಮಾಡಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದಲ್ಲಿ ನಡೆದಿದೆ.
ವಾಸು ಬ್ಲ್ಯಾಕ್ ಮೇಲ್ ಗೊಳಗಾದ ಯುವಕ. ಯುವಕನಿಗೆ ಮೆಸೆಜ್ ಮೂಲಕ ತನ್ನನ್ನು ಅಮೃತಾ ಎಂದು ಪರಿಚಯಿಸಿಕೊಂಡ ಯುವತಿ ಪದೇ ಪದೆ ವಿಡಿಯೋ ಕಾಲ್ ಮಾಡಿದ್ದಾಳೆ ಅಲ್ಲದೇ ಬೆತ್ತಲೆ ವಿಡಿಯೋ ಕಾಲ್ ಮಾಡಿ ರೆಕಾರ್ಡ್ ಮಾಡಿದ್ದಾಳೆ. ತಕ್ಷಣ ಯುವಕ ವಿಡಿಯೋ ಕಾಲ್ ಕಟ್ ಮಾಡಿದ್ದಾನೆ. ಆದರೆ ವಿಡಿಯೋ ಕಾಲ್ ರೆಕಾರ್ಡ್ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಯುವತಿ ಹಣಕ್ಕೆ ಬೇಡಿಕೆ ಇಟ್ಟಿದ್ದಾಳೆ.
ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡುವುದಾಗಿಹಾಗೂ ನಿನ್ನ ಸ್ನೇಹಿತರು, ಕುಟುಂಬದವರಿಗೆ ವಿಡಿಯೋ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾಳೆ. ಈ ಹಿನ್ನೆಲೆಯಲ್ಲಿ ಮೈಸೂರು ಸೈಬರ್ ಪೊಲೀಸ್ ಠಾಣೆಯಲ್ಲಿ ಯುವಕ ದೂರು ದಾಖಲಿಸಿದ್ದಾರೆ.
ಆರೋಪಿ ಯುವತಿ ಪತ್ತೆಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.