ಬೆಳಗಾವಿಯಲ್ಲಿ ತಲೆ ಮರೆಸಿಕೊಂಡಿರುವ ಚಿರತೆ ಶೋಧ ಕುರಿತಂತೆ ಕೈಗೊಂಡ ಕ್ರಮಗಳನ್ನು ಕುರಿತಂತೆ ಇಂದು ಶಾಸಕ ಅನೀಲ್ ಬೆನಕೆ ನೇತೃತ್ವದಲ್ಲಿ ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಹಾಗೂ ಪರಿಣಿತರೊಂದಿಗೆ ಚರ್ಚೆಯನ್ನು ನಡೆಸಿದರು. ಚಿರತೆ ಸೆರೆಗೆ ಕೂಗೊಳ್ಳಬೇಕಾದ ಕ್ರಮಗಳನ್ನು ಕುರಿತಂತೆ ಚರ್ಚಿಸಿದರು.
ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಮತ್ತೆ ಚಿರತೆೆ ಪ್ರತ್ಯಕ್ಷವಾಗುತ್ತಿದ್ದಂತೆ ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿ ಚಿರತೆ ಹಿಡಿಯಲು ಹರಸಾಹಸವನ್ನು ಮಾಡುತ್ತಿದ್ದಾರೆ. ಇನ್ನು ಸ್ಥಳಕ್ಕೆ ಆಗಮಿಸಿದ ಶಾಸಕ ಅನಿಲ್ ಬೆನಕೆ ಅರಣ್ಯ ಇಲಾಖೆ ಆರ್‌ಎಫ್‌ಒ, ಪೊಲೀಸ್ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದರು.
ಈ ವೇಳೆ ಚಿರತೆ ಕಾರ್ಯಾಚರಣೆಗೆ ಕೂಗೊಂಡ ಕ್ರಮಗಳನ್ನು ಕುರಿತಂತೆ ಪರಿಣಿತರು ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆಯನ್ನು ನಡೆಸಿದರು.
Laxmi News 24×7