ಬೆಂಗಳೂರು, ಆ.23: ಬೆಳಗಾವಿ ಜಿಲ್ಲೆಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅನುಮಾನಾಸ್ಪದ ಸಾವಿನ ಪ್ರಕರಣದಲ್ಲಿ ಮಾಜಿ ಸಚಿವ ಈಶ್ವರಪ್ಪ (K. S. Eshwarappa) ವಿರುದ್ಧ ಬಿ ರಿಪೋರ್ಟ್ ಸಲ್ಲಿಸಿರುವುದನ್ನು ಪ್ರಶ್ನಿಸಿ ಸಂತೋಷ್ ಕುಟುಂಬಸ್ಥರು ಜನಪ್ರತಿನಿಧಿಗಳ ವಿಶೇಷ ಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ.
ಉಡುಪಿ ಪೊಲೀಸರು ನಡೆಸಿದ ತನಿಖೆ ನ್ಯಾಯಯುತವಾಗಿಲ್ಲ. ಪೂರ್ವಗ್ರಹ ಪೀಡಿತರಾಗಿ ತನಿಖೆ ನಡೆಸಿದ್ದಾರೆ. ಪಾರದರ್ಶಕ ತನಿಖೆಗಾಗಿ ಸಿಬಿಐಗೆ ಪ್ರಕರಣವನ್ನು ಒಪ್ಪಿಸಬೇಕೆಂದು ಕೋರಿ ನ್ಯಾಯಾಲಯಕ್ಕೆ ಮೃತ ಸಂತೋಷ್ ಸಹೋದರ ಪ್ರಶಾಂತ್ ಅವರು ತಕರಾರು ಅರ್ಜಿ ಸಲ್ಲಿಸಿದ್ದಾರೆ.
Laxmi News 24×7