ಬೆಂಗಳೂರು: ಕರಾವಳಿಯ ಬಹುತೇಕ ಕಡೆ ಬುಧವಾರ ಹಾಗೂ ಗುರುವಾರ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಹಲವು ಕಡೆ ಹಾಗೂ ಉತ್ತರ ಒಳನಾಡಿನ ಕೆಲವೆಡೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾ ಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಎಲ್ಲ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗ ಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಯ ಒಂದೆರಡು ಕಡೆ ಎರಡು ದಿನಗಳು ಭಾರಿ ಮಳೆಯಾ ಗಲಿದೆ.
ಕರಾವಳಿ ತೀರದಲ್ಲಿ ಬಿರು ಗಾಳಿಯ ವೇಗವು ಪ್ರತಿ ಗಂಟೆಗೆ 40 ಕಿ.ಮೀ. ಇಂದ 50 ಕಿ.ಮೀ. ಇರಲಿದೆ. ಈ ವೇಗ 60 ಕಿ.ಮೀ.ವರೆಗೂ ತಲುಪುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ತಿಳಿಸಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಕೆಲವೊಮ್ಮೆ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.
Laxmi News 24×7