ಬೈಲಹೊಂಗಲ : ಸಮೀಪದ ಚಚಡಿ ಗ್ರಾಮದ ಹೊರವಲಯದಲ್ಲಿ ಬುಧವಾರ ನಸುಕಿನಲ್ಲಿ ಕಾರ್ ಪಲ್ಟಿಯಾಗಿ, ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಚಚಡಿ ಗ್ರಾಮದಿಂದ ನಯಾನಗರ ಗ್ರಾಮದ ಮಲಪ್ರಭಾ ನದಿ ಸೇತುವೆ ಮಾರ್ಗವಾಗಿ ಚಲಿಸುತ್ತಿದ್ದ ಕಾರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಯಿತು.
ಅಷ್ಟರಲ್ಲಿ ಏರ್ ಬ್ಯಾಗ್ ತೆರೆದುಕೊಂಡಿದ್ದರಿಂದ ಅದರಲ್ಲಿದ್ದವರಿಗೆ ಹೆಚ್ಚಿನ ಗಾಯಗಳಾಗಿಲ್ಲ.
ಕಾರ್ ತಲೆ ಕೆಳಗಾಗಿ ಬಿದ್ದರೂ ಪ್ರಯಾಣಿಕರು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ.
ಸಿಪಿಐ ಯು.ಎಚ್.ಸಾತೇನಹಳ್ಳಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದರು.
Laxmi News 24×7