Breaking News

4,244 ಅಂಗನವಾಡಿಗಳನ್ನು ಆರಂಭಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ

Spread the love

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 4,244 ಅಂಗನವಾಡಿಗಳನ್ನು ಆರಂಭಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಅಂಗನವಾಡಿ, ಪೋಷಣ್ ಅಭಿಯಾನ-2.0 ಅಡಿ ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರದ ಅನುದಾನದಲ್ಲಿ ಇವುಗಳನ್ನು ತೆರೆಯಲಾಗುತ್ತಿದೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ವಿವರಿಸಿದರು.

 

ಪ್ರಮುಖ ತೀರ್ಮಾನಗಳು

* ಕೊಂಕಣ ರೈಲ್ವೆ ನಿಗಮದ ಅಭಿವೃದ್ಧಿ ಕಾಮಗಾರಿಗಳಿಗಾಗಿ ರಾಜ್ಯ ಸರ್ಕಾರದ ಪಾಲಿನ ಮೊತ್ತವಾದ ₹73.53 ಕೋಟಿ (ಶೇ 15) ಭರಿಸಲು ಅನುಮೋದನೆ.

* ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗವನ್ನು ಕೇಂದ್ರ ನೀತಿ ಆಯೋಗದ ಮಾದರಿಯಲ್ಲಿ ರಚಿಸಿ ಆದೇಶ ಹೊರಡಿಸಿರುವ ಕ್ರಮಕ್ಕೆ ಘಟನೋತ್ತರ ಅನುಮೋದನೆ.

*ವಿಜಯಪುರದಲ್ಲಿ ನ್ಯಾಯಾಲಯ ಡೂಪ್ಲೆಕ್ಸ್‌ ಸಂಕೀರ್ಣ ಕಟ್ಟಡದ ಮೊದಲ ಮಹಡಿಯ ಕಾಮಗಾರಿ ₹12.36 ಕೋಟಿ ಪರಿಷ್ಕೃತ ಅಂದಾಜಿಗೆ ಒಪ್ಪಿಗೆ

*ಉಡುಪಿಯ ಮಲ್ಪೆ ಮೀನುಗಾರಿಕೆ ಬಂದರಿನ 3 ನೇ ಹಂತದ ಅಭಿವೃದ್ಧಿ ಕಾಮಗಾರಿಗಳ ₹49.90 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.

*ಸೇಡಂನಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭ್ಯರ್ಥಿಗಳಿಗೆ ಚಾಲನೆ ಮತ್ತು ಮೆಕ್ಯಾನಿಕಲ್‌ ತರಬೇತಿ ನೀಡುವ ಸಂಸ್ಥೆ ಸ್ಥಾಪನೆಗೆ ಒಪ್ಪಿಗೆ.


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ