Breaking News

ಚಿತ್ರದುರ್ಗ ಮಠದ ಸ್ವಾಮೀಜಿಯಿಂದ ನಿರಂತರ ಲೈಂಗಿಕ ಕಿರುಕುಳ ಆರೋಪ ಮಾಡಿರುವ ವಿದ್ಯಾರ್ಥಿನಿ ಯರು

Spread the love

 ಚಿತ್ರದುರ್ಗದ ಮುರುಘಾಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಶ್ರೀಗಳು ವಿರುದ್ಧ ಮಠದ ಪ್ರೌಢಶಾಲೆಯಲ್ಲಿ 10ನೇ ತರಗತಿ ಓದುತ್ತಿರುವ ಇಬ್ಬರು ವಿದ್ಯಾರ್ಥಿನಿಯರು ದೂರು ನೀಡಿದ್ದಾರೆ.

ವಿದ್ಯಾರ್ಥಿನಿಯರ ಮೇಲೆ ಕಳೆದ ಕೆಲವು ವರ್ಷಗಳಿಂದ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಮೈಸೂರಿನ ನಜರ್‍ಬಾದ್ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಮೈಸೂರಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಮಿತಿ ಸದಸ್ಯರ ದೂರಿನನ್ವಯ ಎಫ್‍ಐಆರ್ ದಾಖಲಿಸಲಾಗಿದೆ. ಕೋರ್ಟ್‍ನ ಮಾರ್ಗದರ್ಶನದಂತೆ ಇದೀಗ ಎಫ್‍ಐಆರ್ ಪ್ರತಿಯನ್ನು ಚಿತ್ರದುರ್ಗದ ಎಸ್ಪಿಗೆ ಕಳುಹಿಸಲಾಗಿದೆ. ಸ್ವಾಮೀಜಿಯ ವಿರುದ್ಧ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯಿದೆ(ಪೋಕ್ಸೊ) ಅಡಿ ಪ್ರಕರಣ ದಾಖಲಾಗಿದೆ.

ವಿದ್ಯಾರ್ಥಿನಿಯರ ಕುಟುಂಬಸ್ಥರಿಗೆ ಸಹಾಯ ಹಸ್ತ

ಚಿತ್ರದುರ್ಗ ಮಠದ ಸ್ವಾಮೀಜಿಯಿಂದ ನಿರಂತರ ಲೈಂಗಿಕ ಕಿರುಕುಳ ಆರೋಪ ಮಾಡಿರುವ ವಿದ್ಯಾರ್ಥಿನಿಯರಿಬ್ಬರು ಮೈಸೂರಿನ ಮಹಿಳಾ ಸಾಂತ್ವನ ಮತ್ತು ಮಕ್ಕಳ ವಸತಿ ಕೇಂದ್ರವಾದ ಒಡನಾಡಿ ಸಂಸ್ಥೆಗೆ ದೂರು ನೀಡಿದ್ದಾರೆ. ಈ ಬಗ್ಗೆ ದೂರು ದಾಖಲಿಸಿಕೊಂಡ ಮಕ್ಕಳ ಕಲ್ಯಾಣ ಸಮಿತಿ ಬಾಲಕಿಯರ ವಿಚಾರಣೆ ನಡೆಸಿದೆ. ಮಠ ನಡೆಸುವ ಪ್ರೌಢಶಾಲೆಯಲ್ಲಿಯೇ ಈ ವಿದ್ಯಾರ್ಥಿನಿಯರು ಓದುತ್ತಿದ್ದಾರೆ.

ಸ್ವಾಮೀಜಿ ಬಳಿಗೆ ಹೋಗಲು ಒಪ್ಪದಿದ್ದರೆ ಹಾಸ್ಟೆಲ್ ಸಿಬ್ಬಂದಿ ಅವಾಚ್ಯ ಶಬ್ಧಗಳಿಂದ ನಿಂದಿಸುತ್ತಿದ್ದರು. ವಿದ್ಯಾರ್ಥಿನಿಯರನ್ನು ಲೈಗಿಂಕವಾಗಿ ಬಳಸಿಕೊಳ್ಳುವ ಮುನ್ನ ಕುಟುಂಬಸ್ಥರಿಗೆ ಸಹಾಯ ಹಸ್ತ ನೀಡಲಾಗುತ್ತಿತ್ತು ಹಾಗೂ ನಂತರ ಲೈಗಿಂಕ ಉದ್ದೇಶಕ್ಕೆ ಬಳಸಿಕೊಂಡಿರುವ ಆರೋಪ ಕೇಳಿಬಂದಿದೆ. ಲೈಂಗಿಕ ಕ್ರಿಯೆಗೆ ಒಪ್ಪದಿದ್ದರೆ ಹಣ್ಣು ಮತ್ತು ಸಿಹಿಯಲ್ಲಿ ಮತ್ತು ಬರಿಸುವ ಔಷಧಿ ಬೆರೆಸಿ ಅತ್ಯಾಚಾರ ನಡೆಸುತ್ತಾರೆ ಎಂದು ದೂರಲಾಗಿದೆ. ಕಿರುಕುಳ ಪ್ರಶ್ನಿಸಿದ ಕಾರಣ ಹಾಸ್ಟೆಲ್‍ನಿಂದ ಹೊರ ಹಾಕಲಾಗುತ್ತಿತ್ತು ಎಂದು ನೊಂದ ವಿದ್ಯಾರ್ಥಿನಿಯರು ತಿಳಿಸಿದ್ದಾರೆ.


Spread the love

About Laxminews 24x7

Check Also

ಚಾಮುಂಡಿ ಬೆಟ್ಟಕ್ಕೆ ಎಲ್ಲಾ ಧರ್ಮದವರಿಗೂ ಪ್ರವೇಶವಿದೆ: ಡಿಸಿಎಂ

Spread the loveಬೆಂಗಳೂರು : ಚಾಮುಂಡಿ ಬೆಟ್ಟಕ್ಕೆ ಎಲ್ಲ ಧರ್ಮದವರಿಗೂ ಪ್ರವೇಶವಿದೆ. ಎಲ್ಲಾ ಸಮಾಜದವರು ಚಾಮುಂಡಿ ಬೆಟ್ಟಕ್ಕೆ ಹೋಗುತ್ತಾರೆ, ದೇವರ ಬಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ