ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ (64) ಶುಕ್ರವಾರ (ಆಗಸ್ಟ್.26) ರಾತ್ರಿ ನಿಧನರಾಗಿದ್ದಾರೆ.
ಮೈಸೂರು ತಾಲೂಕಿನ ಸಿದ್ದರಾಮನಹುಂಡಿ ನಿವಾಸಿ ರಾಮೇಗೌಡ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಮೃತ ರಾಮೇಗೌಡರ ಅಂತ್ಯಕ್ರಿಯೆ ಶನಿವಾರ ಸ್ವಗ್ರಾಮ ಸಿದ್ದರಾಮನ ಹುಂಡಿಯ ಅವರ ಜಮೀನಿನಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.