Breaking News

ಟಿವಿಎಸ್ ಎಕ್ಸೆಲ್ ಗೆ ಹಿಂಬದಿಯಿಂದ ಕಾರು ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು

Spread the love

ದಗ: ಟಿವಿಎಸ್ ಎಕ್ಸೆಲ್ ಗೆ ಹಿಂಬದಿಯಿಂದ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಹೊಂಬಳ ರಸ್ತೆಯಲ್ಲಿ ಭಾನುವಾರ ನಡೆದಿದೆ.

ಗದಗ ನಗರದ ಹಾಳದಿಬ್ಬ ನಿವಾಸಿ ಮಂಜಪ್ಪ ಬಸಪ್ಪ ಕಲಬಂಡಿ(25) ಮೃತಪಟ್ಟ ಸವಾರ.

 

ಮಂಜಪ್ಪ ಕಲಬಂಡಿ ಅವರು ಭಾನುವಾರಬೆಳಿಗ್ಗೆ ಮನೆಯಿಂದ ಹೊಂಬಳ ರಸ್ತೆಯಲ್ಲಿನ ಜಮೀನಿಗೆ ತೆರಳುತ್ತಿದ್ದ ವೇಳೆ ಹಿಂಬದಿಯಿಂದ ಬಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಂಜಪ್ಪ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಳೆದ ಒಂದು ವಾರದ ಹಿಂದೆ ಇದೇ ರಸ್ತೆಯಲ್ಲಿ ಬಸ್ ಬೈಕ್ ಗೆ ಢಿಕ್ಕಿಯಾಗಿ ವ್ಯಕ್ತಿಯೊಬ್ಬರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಇದೀಗ ಇದೇ ರಸ್ತೆಯಲ್ಲಿ ಅಪಘಾತ ಸಂಭವಿದೆ.

ಘಟನಾ ಸ್ಥಳಕ್ಕೆ ಗದಗ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ