ರೈತರಿಗೆ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಬೈಲಹೊಂಗಲ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು ಕೃಷಿ ಇಲಾಖೆಗೆ ತೆರಳಿ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು.
ಬೈಲವಾಡ ಗ್ರಾಮದಲ್ಲಿ ಪ್ರವಾಹದಿಂದ ಬೆಳೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಇತ್ತಿಚೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಕೃಷಿ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡುವಂತೆ ಸಂಬಂಧಪಟ್ಟ ಕೃಷಿ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ.
ಬೆಳೆ ಹಾನಿ ಪರಿಹಾರ ವಿತರಿಸುವಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ವಿಳಂಬ ನೀತಿ ತಾಳಿದ್ದಾರೆ. ಬೆಳೆ ಹಾನಿ ಪರಿಹಾರ ಕೇಳಿದರೆ ಸಜಮಾಯಿಸಿ ನೀಡಿ ರೈತರನ್ನು ಸಾಗು ಹಾಕಲಾಗುತ್ತಿದೆ ಎಂದು ರೈತರು ಕೈಯಲ್ಲಿ ಬೆಳೆಹಾನಿ ಆಗಿರುವ ಫೋಟೋಗಳನ್ನು ಪ್ರದರ್ಶಿಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಬೈಲವಾಡ ಗ್ರಾಮದ ರೈತ ಮಹಾಬಳೇಶ್ವರ ಪಾಟೀಲ ಮಾತನಾಡಿ ಬೆಳಗಾವಿ ಜಿಲ್ಲೆಗೆ 22 ಕೋಟಿ ರೂ. ಬೆಳೆ ಹಾನಿ ಬಂದಿದೆ. ಆದರೆ ಬೈಲವಾಡ ಗ್ರಾಮ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ರೈತರಿಗೆ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ಭಾರಿ ಪ್ರಮಾಣದಲ್ಲಿ ಮೋಸ ಮಾಡಲಾಗಿದೆ.
Laxmi News 24×7