Breaking News

ಹೆಸರಿನಲ್ಲಿ ʼರಾಮʼ.! ಉಂಡ ಮನೆಗೆ ಪಂಗನಾಮ.! : ಸಿದ್ದು ವಿರುದ್ಧ ಶ್ರೀರಾಮುಲು ಕಿಡಿ

Spread the love

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾರಿಗೆ ಸಚಿವ ಬಿ. ಶ್ರೀರಾಮುಲು ವಾಗ್ಧಳಿ ನಡೆಸಿದ್ದಾರೆ. ಸಿದ್ದು ವಿರುದ್ಧ ಸರಣಿ ಟ್ವೀಟ್ ಮಾಡಿದ ಸಾರಿಗೆ ಸಚಿವರು ಹೆಸರಿನಲ್ಲಿ ರಾಮ ಇರಿಸಿಕೊಂಡು ಉಂಡ ಮನೆಗೆ ಪಂಗನಾಮ ಹಾಕುವವರು ನೀವು ಎಂದು ಗುಡುಗಿದ್ದಾರೆ.

 

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಶ್ರೀರಾಮುಲು… ಆಚಾರವಿಲ್ಲದ ನಾಲಿಗೆ ನಿನ್ನ ನೀಚ ಬುದ್ಧಿಯ ಬಿಡು. ದಾಸಶ್ರೇಷ್ಠ ಶ್ರೀ ಪುರಂದರದಾಸರು ಮಾಜಿ ಸಿ.ಎಂ. ಸಿದ್ದರಾಮಯ್ಯನಂತವರನ್ನು ನೋಡಿಯೇ ಈ ಪದವನ್ನು ಬರೆದಿದ್ದರೆ ಅಚ್ಚರಿಯಿಲ್ಲ. ಏಕೆಂದರೆ ನೀವು ಜೀವನದಲ್ಲಿ ಇನ್ನೊಬ್ಬರನ್ನು ಮುಗಿಸಿಯೇ ಮೇಲಕ್ಕೆ ಬಂದ ಮಹಾಪುರುಷ ತಾವಲ್ಲವೇ? ಎಂದು ಹೇಳಿದ್ದಾರೆ.

ಸುಳ್ಳೇ ನಮ್ಮ ಮನೆದೇವರು ಎಂಬುದನ್ನು ನಿಮ್ಮನ್ನು ನೋಡಿ ಕಲಿಯಬೇಕು. ಏಕೆಂದರೆ ನೀವು ಹೇಳುವುದು ಒಂದು, ಮಾಡುವುದು ಇನ್ನೊಂದು ಎಂಬುದು ‌ಎಲ್ಲರಿಗೂ ಗೊತ್ತಿರುವ ವಿಷಯ.! ಇಂತಹ ಕಲೆ ನಿಮಗಲ್ಲದೆ ಬೇರೆಯವರಿಗೆ ಬರಲು ಹೇಗೆ ಸಾಧ್ಯ? ಸುಳ್ಳಿನ ರಾಮಯ್ಯನವರೇ?

ಮಾತೆತ್ತಿದರೆ ಅಹಿಂದ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ನೀವು 2018 ರ ವಿಧಾನಸಭೆ ಚುನಾವಣೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ್ ಅವರಿಗೆ ಕೊರಟಗೆರೆಯಲ್ಲಿ ಬೆನ್ನಿಗೆ ಚೂರಿ ಹಾಕಿದ್ದು ಯಾರು? ಯಾವ ಯಾವ ಸಂಧರ್ಭದಲ್ಲಿ ಯಾರ ಕುತ್ತಿಗೆ ಕೊಯ್ದಿರಿ ಎಂಬುದನ್ನು ಬಹಿರಂಗ ಪಡಿಸಲೇ ಚೂರಿ ರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಯಾರೋ ಕಟ್ಟಿದ ಹುತ್ತಕ್ಕೆ ಕರಿ ನಾಗನಂತೆ ಸೇರಿಕೊಂಡ ನೀವು ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್, ಕೆ.ಹೆಚ್ .ಮುನಿಯಪ್ಪ, ಅಲ್ಪಸಂಖ್ಯಾತ ಸಮುದಾಯದ ಜಾಫರ್ ಷರೀಪ್, ಸೇರಿದಂತೆ ಹಲವರನ್ನು ಮುಗಿಸಿಯೇ ಮೇಲಕ್ಕೆ ಬಂದ ನಿಮ್ಮದು ಯಾವ ಸೀಮೆಯ ಅಹಿಂದ ? ಬಿಡಿಸಿ ಹೇಳುತ್ತೀರಾ? ಅಹಿಂದ ನಾಯಕರನ್ನು ಮುಗಿಸಿರುವ ನಿಮ್ಮ ಮುಂದಿನ ಗುರಿ ಒಕ್ಕಲಿಗರಾ? ಅದರಲ್ಲೂ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ್ ಇರಬಹುದೇ? ಎಲ್ಲಿ ನನಗೆ ಸ್ಪರ್ಧೆಯೊಡ್ಡಬಹುದು ಎಂಬ ಆತಂಕದಿಂದ ಅವರನ್ನೂ ಮೂಲೆಗುಂಪು ಮಾಡುವ ನಿಮ್ಮ ಯತ್ನ ಮುಗಿದಿಯೇ ಇಲ್ಲವೇ ಮುಂದುವರೆಯುವುದೋ? ಎಂದಿದ್ದಾರೆ.


Spread the love

About Laxminews 24x7

Check Also

ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ ಬಿಜೆಪಿ ಸೆಡ್ಡು!

Spread the love ಕಾಂಗ್ರೆಸ್ ಪಕ್ಷಕ್ಕೆ ಮುಜುಗರಕ್ಕಿಡಾಗಿಸಿದ ಬಿಜೆಪಿ; ನಾಟಿ ಕೋಳಿ ಸರ್ಕಾರದ ಘೋಷಣೆಗಳು* ನಾಟಿ ಕೋಳಿ ಸರ್ಕಾರಕ್ಕೆ ವಿಜಯಪುರದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ