ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಅವರು ತೆರೆಳುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು. ಘಟನೆಯಲ್ಲಿ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯವಾಗಿದ್ದು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಕಾರು ಅಪಘಾತವಾಗಿದ್ದು, ಕಾರಿನಲ್ಲಿದ್ದ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಇತರ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಹಾರೂಗೇರಿ ಪಟ್ಟಣದ ಹೊರವಲಯದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಕ್ಷ್ಮಣ ಸವದಿ ಅವರು ತೆರಳುತ್ತಿದ್ದ ಕಾರು ರಸ್ತೆ ಬದಿಗೆ ಪಲ್ಟಿಯಾಗಿ ಬಿದ್ದಿದೆ.
ಈ ಕಾರಿನಲ್ಲಿ ಸವದಿ ಸೇರಿದಂತೆ ನಾಲ್ಕು ಜನರು ಪ್ರಯಾಣ ಮಾಡುತ್ತಿದ್ದರು. ಅಥಣಿಯಿಂದ ಬೆಳಗಾವಿಗೆ ಬರುವಾಗ ಕಾರು ಪಲ್ಟಿಯಾಗಿದೆ. ಈ ವೇಳೆ ಸ್ಥಳೀಯರ ಸಹಾಯದಿಂದ ಕಾರನ್ನು ಮೇಲಕ್ಕೆ ಎತ್ತಲಾಗಿದೆ. ಕಾರಿನಲ್ಲಿ ಸಿಲುಕಿದ್ದ ಲಕ್ಷ್ಮಣ ಸವದಿ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.