Breaking News

ಈದ್ಗಾ ಮೈದಾನದ ಗಣೇಶ ಮೂರ್ತಿ ಬಳಿ ಸಾವರ್ಕರ್,ಭಗತ್ ಸಿಂಗ್,ಶಿವಾಜಿ ಫ್ಲೆಕ್ಸ್: ನಿಯಮ ಉಲ್ಲಂಘನೆ

Spread the love

ಹುಬ್ಬಳ್ಳಿ: ಇಲ್ಲಿನ ಕಿತ್ತೂರು ಚನ್ನಮ್ಮವೃತ್ತದ ಬಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಮೂರು ದಿನ ಗಣೇಶೋತ್ಸವ ಆಚರಿಸಲು ಅನುಮತಿ ಪಡೆದಿರುವ ರಾಣಿ ಚನ್ಮಮ್ಮ ಮೈದಾನ ಗಜಾನನ ಉತ್ಸವ ಮಹಾಮಂಡಳಿಯವರು, ಪೊಲೀಸರ ವಿರೋಧದ ಮಧ್ಯೆಯೇ ಪೆಂಡಾಲ್ ಎದುರಿನ ದ್ವಾರದಲ್ಲಿ ವಿ.ಡಿ. ಸಾವರ್ಕರ್, ಭಗತ್ ಸಿಂಗ್, ಶಿವಾಜಿ ಭಾವಚಿತ್ರವಿರುವ ಫ್ಲೆಕ್ಸ್ ಅಳವಡಿಸಿದರು.

 

ಇದರೊಂದಿಗೆ ಅನುಮತಿ ನೀಡುವಾಗ ಪಾಲಿಕೆ ನೀಡಿದ್ದ ಷರತ್ತನ್ನು ಮಹಾಮಂಡಳಿ ಉಲ್ಲಂಘಿಸಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೂ ಮುಂಚೆ ಸಾವರ್ಕರ್ ಮತ್ತು ಬಾಲಗಂಗಾಧರ ತಿಲಕ್ ಅವರಿರುವ ಭಾವಚಿತ್ರವನ್ನೊಳಗೊಂಡ ಮಹಾಮಂಡಳಿಯ ಬ್ಯಾನರ್ ಹಾಕಲು ಮುಂದಾಗಿದ್ದಾಗ, ಪೊಲೀಸರು ತಡೆದಿದ್ದರು. ನಂತರ, ಸದಸ್ಯರು ಬ್ಯಾನರ್ ಮಡಿಚಿಟ್ಟಿದ್ದರು. ಇದಾದ ಒಂದು ಗಂಟೆಯ ಬಳಿಕ ಸದಸ್ಯರು ಗೇಟ್‌ ಹಾಗೂ ಸುತ್ತಮುತ್ತ ಭಾವಚಿತ್ರಗಳನ್ನು ಅಳವಡಿಸಿದ್ದರು. ಪೊಲೀಸರು ಅವನ್ನೆಲ್ಲ ತೆರವು ಮಾಡಿದ್ದಾರೆ.

ಷರತ್ತಿನಲ್ಲಿ ಏನಿದೆ: ಅನುಮತಿಯೊಂದಿಗೆ ಪಾಲಿಕೆ ವಿಧಿಸಿರುವ ಒಂಬತ್ತು ಷರತ್ತುಗಳಲ್ಲಿ, ಗಣೇಶ ಮೂರ್ತಿಯನ್ನು ಬಿಟ್ಟು ಸ್ಥಳದಲ್ಲಿ ಬೇರಾವುದೇ ಮೂರ್ತಿ, ಫ್ಲೆಕ್ಸ್, ಭಾವಚಿತ್ರ ಹಾಗೂ ಜಾಹೀರಾತನ್ನು ಪ್ರದರ್ಶಿಸುವಂತಿಲ್ಲ. ಹೀಗಿದ್ದರೂ, ಮಹಾಮಂಡಳಿ ಷರತ್ತು ಉಲ್ಲಂಘಿಸಿದೆ ಎನ್ನಲಾಗಿದೆ.


Spread the love

About Laxminews 24x7

Check Also

ಸಿಎಂ ಫೋನ್ ಮಾಡಿ ಸಮಾಧಾನಪಡಿಸಿದ ಬಳಿಕ ಕರ್ತವ್ಯಕ್ಕೆ ಹಾಜರಾದ ASP ಭರಮನಿ

Spread the loveಧಾರವಾಡ/ಬೆಂಗಳೂರು: ಸ್ವಯಂ ನಿವೃತ್ತಿಗೆ ಕೋರಿಕೆ ಸಲ್ಲಿಸಿದ್ದ ಧಾರವಾಡ ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್‌.ವಿ.ಭರಮನಿ ಅವರು ಸಿಎಂ ಸಮಾಧಾನಪಡಿಸಿದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ