Breaking News

ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲ

Spread the love

ಚಿತ್ರದುರ್ಗ : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗದಿಂದ ಸ್ವಾಮೀಜಿ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿದೆ.

ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಚಿತ್ರದುರ್ಗದ ಎಸ್ ಪಿ ಅವರಿಗೆ ನೋಟಿಸ್ ನೀಡಲಾಗಿದ್ದು, ಮುರುಘಾಮಠದ ಶ್ರೀಗಳ ವಿರುದ್ಧ ಸುಮೋಟೋ ಕೇಸ್ ದಾಖಲಿಸಿದೆ. ಪ್ರಕರಣದ ಬಗ್ಗೆ ವರದಿ ನೀಡುವಂತೆ ಎಸ್ ಪಿ ಸೂಚನೆ ನೀಡಲಾಗಿದೆ. ಸ್ವಾಮೀಜಿ ವಿರುದ್ಧ ಸ್ವಯಂ ಪ್ರೇರಿತ ಕೇಸ್ ದಾಖಲಿಸಿಕೊಂಡ ರಾಷ್ಟ್ರೀಯ ಮಕ್ಕಳ ಹಕ್ಕು ರಕ್ಷಣಾ ಆಯೋಗ ಪ್ರಕರಣದ ವರದಿ ನೀಡುವಂತೆ ಚಿತ್ರದುರ್ಗದ ಎಸ್ ಪಿ ಗೆ ನೋಟಿಸ್ ನೀಡಿದೆ.

ನೋಟಿಸ್ ತಲುಪಿದ ಏಳು ದಿನಗಳಲ್ಲಿ ಉತ್ತರ ನೀಡುವಂತೆ ಸೂಚನೆ ನೀಡಲಾಗಿದ್ದು, ಪೋಲೀಸರು ಕೈಗೊಂಡ ಕ್ರಮದ ಬಗ್ಗೆ ಮಕ್ಕಳ ಹಕ್ಕು ರಕ್ಷಣಾ ಆಯೋಗ ಮಾಹಿತಿ ಕೇಳಿದೆ. ಈ ಮೂಲಕ ಮುರುಘಾಮಠದ ಶ್ರೀಗಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ