Breaking News

ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ.: ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ: ಭಾಸ್ಕರ್‍ರಾವ್

Spread the love

ರಾಜ್ಯದಲ್ಲಿ ಬಿಜೆಪಿ ಪಕ್ಷ ಹುಟ್ಟಿರೋದೇ ಭ್ರಷ್ಟಾಚಾರದಿಂದ. ಬಾಂಬೆಯಲ್ಲಿ ಕಾಂಗ್ರೆಸ್, ಜೆಡಿಎಸ್ ಶಾಸಕರನ್ನು ಇರಿಸಿ, ಅವರ ವಿಡಿಯೋ ಮಾಡಿ ಬ್ಲಾಕ್‍ಮೇಲ್ ಮಾಡಿ ಇವರು ಅಧಿಕಾರಕ್ಕೆ ಬಂದಿದ್ದಾರೆ. ಕೆಂಪು ಕೋಟೆ ಮೇಲೆ ನಿಂತು ಭ್ರಷ್ಟಾಚಾರ ವಿರುದ್ಧ ಪ್ರಧಾನಿ ಮೋದಿ ಮಾತನಾಡುತ್ತಾರೆ.

ನಾನು ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಹೊಂದಾಣಿಕೆ ಮಾಡಿಕೊಳ್ಳುವುದಿಲ್ಲ. ಆದರೆ ಇಷ್ಟೆಲ್ಲಾ ಭ್ರಷ್ಟಾಚಾರ ನಡೆಯುತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಮುಖಂಡ ಭಾಸ್ಕರ್‍ರಾವ್ ಆರೋಪಿಸಿದರು.

ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಭಾಸ್ಕರ್‍ರಾವ್ ನಾಲ್ಕು ತಿಂಗಳ ಹಿಂದೆ ಗುತ್ತಿಗೆದಾರರು 40 ಪರ್ಸೆಂಟ್ ಸರ್ಕಾರ ಎಂದು. ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದರೂ ಯಾವುದೇ ಪ್ರಯೋಜನ ಆಗಿಲ್ಲ.

ಇದೀಗ 50 ಪರ್ಸೆಂಟ್ ಸರ್ಕಾರ ಎಂದು ಕೇಂದ್ರ ಸರ್ಕಾರಕ್ಕೆ ಮತ್ತೆ ಗುತ್ತಿಗೆದಾರರು ಪತ್ರ ಬರೆಯಲು ಮುಂದಾಗಿದ್ದಾರೆ. ಇನ್ನು ಶಿಕ್ಷಣ ಸಂಸ್ಥೆಗಳಲ್ಲಿಯೂ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಪ್ರಧಾನಮಂತ್ರಿ ಕರ್ನಾಟಕಕ್ಕೆ ಬರ್ತಾಯಿದ್ದಾರೆ. ಯಾಕೇ ಪ್ರಧಾನಮಂತ್ರಿ ಕರ್ನಾಟಕದ ಭ್ರಷ್ಟಾಚಾರ ವಿಚಾರದಲ್ಲಿ ಮೌನವಾಗಿದ್ದಾರೆ. ಈ ಸರ್ಕಾರದಲ್ಲಿ ಶೇ.40 ಅಲ್ಲ ಶೇ.50ರಷ್ಟು ಭ್ರಷ್ಟಾಚಾರ ನಡೆಯುತ್ತಿರುವ ವಿಚಾರವನ್ನ ಗುತ್ತಿಗೆದಾರರೇ ಆರೋಪಿಸಿದ್ದಾರೆ.

ಪಿಎಸ್‍ಐ ನೇಮಕಾತಿಯಲ್ಲಿ ಭ್ರಷ್ಟಾಚಾರ ನಡೆದಿದೆ. ಇದರಿಂದ ಸಾವಿರಾರು ಪರೀಕ್ಷಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಕೊರೊನಾ ಸಂದರ್ಭದಲ್ಲಿ ಆರೋಗ್ಯ ಸಚಿವರ ಮೇಲೂ ಭ್ರಷ್ಟಾಚಾರದ ಆರೋಪ ಬಂದಿದೆ.

ನಮ್ಮ ರಾಜ್ಯದಲ್ಲಿ ಶೇ.100 ನಡೆದ ಪ್ರಕರಣಗಳು ಇವೆ. ಸಚಿವ ಮುನಿರತ್ನ ವಿರುದ್ಧ ಕ್ರಮ ಆಗಬೇಕು. ಮಂಗಳೂರಿಗೆ ಬರುತ್ತಿರುವ ಪ್ರಧಾನಮಂತ್ರಿ ಭ್ರಷ್ಟಾಚಾರ ಬಗ್ಗೆ ಏನ್ ಮಾಡ್ತಾರೆ ಅನ್ನೋದನ್ನ ನೋಡಬೇಕಿದೆ ಎಂದರು.


Spread the love

About Laxminews 24x7

Check Also

ತಾಯಿಯೊಂದಿಗೆ ಚಿನ್ನದ ಹುಡುಗ ಕಾರ್ತಿಕ್

Spread the loveಬೆಳಗಾವಿ: ತಾಯಿ ಟೈಲರಿಂಗ್ ಕೆಲಸ ಮಾಡುತ್ತಾರೆ. ತಂದೆ ಇಲ್ಲ. ತಾಯಿಗೆ-ಮಗ, ಮಗನಿಗೆ-ತಾಯಿನೇ ಎಲ್ಲಾ. ಮನೆಯಲ್ಲಿ ಬಡತನ ಹಾಸು ಹೊಕ್ಕಾಗಿತ್ತು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ