Breaking News

ಚೌತಿ ಮೆರವಣಿಗೆ ವೇಳೆ ಮಸೀದಿ ಆವರಣಕ್ಕೆ ಬಣ್ಣ ಎರಚಿದ ಯೋಧ; ಸೈನಿಕನ ಬಂಧನ, ಪ್ರಕರಣ ದಾಖಲು..

Spread the love

ಬಾಗಲಕೋಟೆ: ಚತುರ್ಥಿ ಪ್ರಯುಕ್ತ ಗಣೇಶ ಮೂರ್ತಿ ಪ್ರತಿಷ್ಠಾಪನಾ ಮೆರವಣೆಗೆ ಸಂದರ್ಭದಲ್ಲಿ ಯೋಧನೊಬ್ಬ ಮಸೀದಿಯೊಂದರ ಆವರಣಕ್ಕೆ ಬಣ್ಣ ಎರಚಿದ್ದು, ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ.

 

ಆನಂದ ಕುದುರಿಕಾರ ಬಂಧಿತ ಯೋಧ. ಈತ ಮರಾಠಾ ಲೈನ್ ಇನ್​ಫ್ಯಾಂಟ್ರಿ ಬೆಳಗಾವಿಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರಜೆ ಮೇಲೆ ಊರಿಗೆ ಬಂದಿದ್ದಾಗ ಈ ಕೃತ್ಯವೆಸಗಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಬಾಗಲಕೋಟೆ ಪೊಲೀಸರು ಸೈನಿಕನನ್ನು ಬಂಧಿಸಿದ್ದಾರೆ.

ಬಾಗಲಕೋಟೆ ನಗರದ ಕಿಲ್ಲಾ ಓಣಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಸಲುವಾಗಿ ನಿನ್ನೆ ಈ ಮೆರವಣಿಗೆ ನಡೆದಿದ್ದು, ಯೋಧ ಆನಂದ ಕೂಡ ಪಾಲ್ಗೊಂಡಿದ್ದ. ಈ ಸಂದರ್ಭದಲ್ಲಿ ಬಾಗಲಕೋಟೆ ಪಂಕಾ ಮಸೀದಿ ಆವರಣಕ್ಕೆ ಬಣ್ಣ ಎರಚಿದ್ದ.


Spread the love

About Laxminews 24x7

Check Also

ಬಸವೇಶ್ವರ ಪ.ಪೂ ವಾಣಿಜ್ಯ ಮಹಾವಿದ್ಯಾಲಯದ ಫಲಿತಾಂಶ : ಶೇ.88.10%

Spread the loveಬಾಗಲಕೋಟೆ: 2025-26ನೇ ಸಾಲಿನ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿಯ ಫಲಿತಾಂಶ ಪ್ರಕಟವಾಗಿದ್ದು, ಮಹಾವಿದ್ಯಾಲಯದ ಕುಮಾರ ಮಂಥನ ಮಹಾವೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ