Breaking News

ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ: ಮುರುಘಾ ಶ್ರೀಗಳಿಗೆ 14 ದಿನ ನ್ಯಾಯಾಂಗ ಬಂಧನ

Spread the love

ಚಿತ್ರದುರ್ಗ: ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಕಳೆದ ರಾತ್ರಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್​ ನ್ಯಾಯಾಲಯದ ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

ವಿವರ: ಗುರುವಾರ ತಡರಾತ್ರಿ ಪೊಲೀಸರು ಶ್ರೀಗಳನ್ನು ಬಂಧಿಸಿದ್ದು, ಕಾನೂನು ಪ್ರಕಾರ ವೈದ್ಯಕೀಯ ಪರೀಕ್ಷೆ ನಡೆಸಿದರು. ಇದಾದ ಬಳಿಕ ಚಿತ್ರದುರ್ಗ ಜಿಲ್ಲಾ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಲಾಗಿತ್ತು. ಕೋರ್ಟ್‌ ಶ್ರೀಗಳನ್ನು ಹದಿನಾಲ್ಕು ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿತು. ಇದರ ಬೆನ್ನಲ್ಲೇ ಶ್ರೀಗಳನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ ಎಂದು ತಿಳಿದು ಬಂದಿದೆ.

ಜಿಲ್ಲಾ ಕಾರಾಗೃಹದಲ್ಲಿ ಶ್ರೀಗಳು: ಇದಕ್ಕೂ ಮುನ್ನ ಶರಣರ ಪರ ವಕೀಲರು ಜಾಮೀನು ಕೋರಿ ಸ್ಥಳದಲ್ಲೇ ಅರ್ಜಿ ಸಲ್ಲಿಸಿದ್ದರು. ಅರ್ಜಿ ತಿರಸ್ಕರಿಸಿದ ನ್ಯಾಯಾಧೀಶರು ಶುಕ್ರವಾರ ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಸೂಚಿಸಿದ್ದಾರೆ. ನಂತರ ಪೊಲೀಸರು ಶ್ರೀಗಳನ್ನು ಚಿತ್ರದುರ್ಗಾ ಜಿಲ್ಲಾ ಕಾರಾಗೃಹಕ್ಕೆ ಕರೆದೊಯ್ದರು.


Spread the love

About Laxminews 24x7

Check Also

ಸಿಎಂ ಡಿನ್ನರ್‌ ಪಾರ್ಟಿಯಲ್ಲಿ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆ ಆಗಿಲ್ಲ: ಸಚಿವ ಶರಣಪ್ರಕಾಶ್‌ ಪಾಟೀಲ್

Spread the love ಮೈಸೂರು: ನಾನೂ ಸಿಎಂ ಸಿದ್ದರಾಮಯ್ಯನವರ ಡಿನ್ನರ್‌ ಪಾರ್ಟಿಗೆ ಹೋಗಿದ್ದೆ. ಅಲ್ಲಿ ಸಂಪುಟ ಪುನಾರಚನೆಯ ಬಗ್ಗೆ ಚರ್ಚೆ ಆಗಿಲ್ಲ, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ