Breaking News

‘ವರ್ಷಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಅವನು ಮುರುಘಾ ಅಲ್ಲ ಮೃಗ’: ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಆಕ್ರೋಶ

Spread the love

ಚಿತ್ರದುರ್ಗ ಸೆಪ್ಟೆಂಬರ್ 1: ‘ಹಲವು ವರ್ಷಗಳಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅವನು ಮುರುಘಾ ಅಲ್ಲ ಮೃಗ’ ಎಂದು ಒಡನಾಡಿ ಸಂಸ್ಥೆ ಮುಖ್ಯಸ್ಥ ಪರಶು ಆಕ್ರೋಶ ಹೊರಹಾಕಿದ್ದಾರೆ.

ಫೋಕ್ಸೋ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದ್ದು ಅಜ್ಞಾತ ಸ್ಥಳದಲ್ಲಿ ಇರಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನೂ ಈ ಅತ್ಯಾಚಾರದ ಆರೋಪದ ಮೇಲೆ ಒಟ್ಟು ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಈಗಾಗಲೇ ಇಬ್ಬರ ಬಂಧನವಾಗಿದೆ. ಮೊದಲನೇ ಆರೋಪಿ ಮಠದ ಮಹಿಳಾ ವಾರ್ಡನ್ ಆಗಿದ್ದು ಅವರನ್ನು ಬಂಧಿಸಿ ವಿಚಾರಣೆ ಮಾಡಲಾಗಿದೆ. ನಂತರ ಶ್ರೀಗಳನ್ನು ಇಂದು ಬಂಧಿಸಲಾಗಿದ್ದು ಇನ್ನೂ ಮೂವರ ಬಂಧನವಾಗಬೇಕಿದೆ. ಮೂರನೇ ಆರೋಪಿ ಮಠದ ಉತ್ತರಾಧಿಕಾರಿ ಬಸವಾದಿತ್ಯ, ನಾಲ್ಕನೇ ಆರೋಪಿ ಮಠದ ಕಾರ್ಯದರ್ಶಿ ಪರಮಶಿವಯ್ಯ, ಇನ್ನೂ ಐದನೇ ಆರೋಪಿ ವಕೀಲ ಗಂಗಾಧರಯ್ಯ ಅವರ ಬಂಧನವಾಗಬೇಕಿದೆ. ಪ್ರಕರಣದ ಬೆಳವಣಿಗೆ ಬಗ್ಗೆ ಒಡನಾಡಿ ಸಂಸ್ಥೆಯ ಪರಶು ಮುಖ್ಯಸ್ಥ ಪ್ರತಿಕ್ರಿಯೆ ನೀಡಿದ್ದಾರೆ.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ