Breaking News

ಶಿಕ್ಷಕರ ಅರ್ಹತಾ ಪರೀಕ್ಷೆಗೆ ಅರ್ಜಿ ಆಹ್ವಾನ

Spread the love

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯು 2022ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಗೆ (ಟಿಇಟಿ) ಅರ್ಜಿ ಆಹ್ವಾನಿಸಿದ್ದು, ಅರ್ಹ ಅಭ್ಯರ್ಥಿಗಳು ಸೆ.30ರ ವರೆಗೆ ಅರ್ಜಿ ಸಲ್ಲಿಸಬಹುದು.

ಇಲಾಖೆಯ ವೆಬ್‌ಸೈಟ್‌ schooleducation.kar.nic.in ನಲ್ಲಿ ಆನ್‌ಲೈನ್‌ ಮೂಲಕ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

 

ಪರೀಕ್ಷಾ ದಿನಾಂಕದ ಬಗ್ಗೆ ಇಲಾಖೆ ಯಾವುದೇ ಮಾಹಿತಿ ನೀಡಿಲ್ಲ. ಶೀಘ್ರದಲ್ಲಿಯೇ ದಿನಾಂಕ ಪ್ರಕಟಿಸುವುದಾಗಿ ತಿಳಿಸಿದೆ. ಆದರೆ, ಶಾಲಾ ಶಿಕ್ಷಣ ಮತು ಸಾಕ್ಷರತಾ ಸಚಿವ ಬಿ.ಸಿ. ನಾಗೇಶ್‌ ಅವರು ಇತ್ತೀಚೆಗೆ ನ.6ರಂದು ಟಿಇಟಿ ಪರೀಕ್ಷೆ ನಡೆಸುವುದಾಗಿ ತಿಳಿಸಿದ್ದರು. ಅದರಂತೆ ನವೆಂಬರ್‌ ತಿಂಗಳಿನಲ್ಲಿ ಪರೀಕ್ಷೆ ನಡೆಯುವ ಸಾಧ್ಯತೆಗಳಿವೆ ಎಂದು ಇಲಾಖೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂ ಗಳ ಸೇರ್ಪಡೆ ವಿವಾದ – ನಿರ್ಧಾರ ಕೈಬಿಡುವಂತೆ ಸಿಎಂಗೆ ಹೆಚ್‌ಡಿಕೆ ಪತ್ರ

Spread the loveಮಂಡ್ಯ: ಜಿಲ್ಲೆಯ ಮದ್ದೂರು  ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನ ಸ್ಥಳೀಯರ ಆಶಯಗಳಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ