Breaking News

ಮಂಗಳೂರಿನಲ್ಲಿಂದು ‘ನಮೋ’ ಹವಾ: ಪ್ರಧಾನಿ ಮೋದಿಯವರ ಕಾರ್ಯಕ್ರಮದ ಸಂಪೂರ್ಣ ವಿವರ ಹೀಗಿದೆ.

Spread the love

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರು ಭೇಟಿ ನೀಡಲಿದ್ದಾರೆ. ಕೊಚ್ಚಿನ್​ನಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮಧ್ಯಾಹ್ನ 12.55ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ, ಕೇಂದ್ರ ಸಚಿವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ.

 

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.20ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಪಣಂಬೂರುನಲ್ಲಿರುವ ಎನ್​.ಎಂ.ಪಿ.ಎ ಹೆಲಿಪ್ಯಾಡ್​ಗೆ ಬರಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ ಎನ್​.ಎಂ.ಪಿ.ಎ ಹೆಲಿಪ್ಯಾಡ್​ನಿಂದ ಒಂದೂವರೆ ಕಿ.ಮೀ ದೂರದಲ್ಲಿರುವ ಬಂಗ್ರಕುಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯುವ ಮಂಗಳೂರು ಬಂದರಿನ ವಿವಿಧ ಅಭಿವೃದ್ಧಿ ಯೋಜನೆಗಳ ಶಿಲಾನ್ಯಾಸ ಮತ್ತು ಕಾಮಗಾರಿಯ ಬೃಹತ್ ಸಾರ್ವಜನಿಕ ಸಭೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಲಿದ್ದಾರೆ.

ಈ ಕಾರ್ಯಕ್ರಮ ಮಧ್ಯಾಹ್ನ 2.55 ರವರೆಗೆ ನಡೆಯಲಿದ್ದು ಮತ್ತೆ ಪ್ರಧಾನಿ ಮೋದಿ ರಸ್ತೆ ಮಾರ್ಗದ ಮೂಲಕ ಎನ್​.ಎಂ.ಪಿ.ಎ ಹೆಲಿಪ್ಯಾಡ್​ನತ್ತ ತೆರಳಲಿದ್ದಾರೆ. ಒಂದು ಗಂಟೆಗೆ ಪಕ್ಷದ ಪ್ರಮುಖ ರೊಂದಿಗೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 4 ಗಂಟೆಗೆ ಎನ್​.ಎಂ.ಪಿ.ಎ ಹೆಲಿಪ್ಯಾಡ್​ನಿಂದ ಹೆಲಿಕಾಪ್ಟರ್ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ತೆರಳಲಿರುವ ಮೋದಿ ಬಳಿಕ ವಿಶೇಷ ವಿಮಾನದಲ್ಲಿ ದೆಹಲಿಯತ್ತ ಪ್ರಯಾಣ ಬೆಳೆಸಲಿದ್ದಾರೆ.

ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನಕ್ಕೆ ಮೂರು ಸಾವಿರ ಪೊಲೀಸರ ಸರ್ಪಗಾವಲು ಹಾಕಲಾಗಿದೆ. ಡಿಜಿಪಿ, ಎಡಿಜಿಪಿ, ಕಮಿಷನರ್ ನೇತೃತ್ವದಲ್ಲಿ ಭಾರೀ ಭದ್ರತೆ ಒದಗಿಸಲಾಗಿದೆ. ಎರಡು ಸಾವಿರ ಬಸ್ಸುಗಳಲ್ಲಿ ಎರಡು ಲಕ್ಷಕ್ಕೂ ಮಿಕ್ಕಿದ ಫಲಾನುಭವಿಗಳು, ಕಾರ್ಯಕರ್ತರ ಆಗಮನ ನಿರೀಕ್ಷೆ ಇದೆ.

ಇವತ್ತಿನ ಕಾರ್ಯಕ್ರಮಗಳ ವಿವರ ಇಂತಿದೆ:
– ಸಾವಿರ ಕೋಟಿ ಯೋಜನೆಗೆ ಕಡಲತಡಿಯಲ್ಲಿ ಪ್ರಧಾನಿ ಮೋದಿ ಚಾಲನೆ
– ಸರ್ಕಾರಿ ಕಾರ್ಯಕ್ರಮದ ಬಳಿಕ ಬಿಜೆಪಿ ಕೋರ್ ಕಮಿಟಿ ಸಭೆ
– ಸರ್ಕಾರದ ಅಧಿಕೃತ ಕಾರ್ಯಕ್ರಮ ‌ಮತ್ತು ಬಿಜೆಪಿ ನಾಯಕರ ಸಭೆಯಲ್ಲೂ ಮೋದಿ ಭಾಗಿ
– ಕೊಚ್ಚಿಯಿಂದ ಮಧ್ಯಾಹ್ನ 12:55 ಗಂಟೆಗೆ ಮಂಗಳೂರಿಗೆ ಆಗಮಿಸಲಿರೋ ನಮೋ
– ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ 1.30 ಗಂಟೆಗಳ ಕಾಲ ಮೋದಿ ಮೋಡಿ
– ನವಮಂಗಳೂರು ಬಂದರು ಮತ್ತು ಎಂಆರ್ ಪಿಎಲ್ ನ ಸಾವಿರ ಕೋಟಿ ಯೋಜನೆಗೆ ಮೋದಿ ಚಾಲನೆ
– ಸರ್ಕಾರಿ ಕಾರ್ಯಕ್ರಮ ‌ಮುಗಿಸಿ ಬಿಜೆಪಿ ಕೋರ್ ಕಮಿಟಿ ಸಭೆ
– 281 ಕೋ. ರೂ. ವೆಚ್ಚದಲ್ಲಿ ನವ ಮಂಗಳೂರು ಬಂದರಿನ 14ನೇ ಬರ್ತ್ ಯಾಂತ್ರೀಕರಣ
– 100 ಕೋಟಿ ರೂ. ವೆಚ್ಚದಲ್ಲಿ ಬಿಟುಮಿನ್(ಡಾಮರ್) ಸಂಗ್ರಹಗಾರ ನಿರ್ಮಾಣ
– 100 ಕೋಟಿ ವೆಚ್ಚದಲ್ಲಿ ನವಮಂಗಳೂರು ಬಂದರಿನಲ್ಲಿ ಸಂತೋಷಿ ಮಾತಾ ಕಂಪೆನಿಯ ಖಾದ್ಯ ತೈಲ ಸಂಗ್ರಹಗಾರ
– 677 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಮೊದಲ ಡಿಸಲೈನೇಶನ್ ಪ್ಲಾಂಟ್​ಗೆ ಚಾಲನೆ
– 1829 ಕೋಟಿ ರೂ. ಮೊತ್ತದ ಬಿಎಸ್6 ಇಂಧನ ಸ್ಥಾವರ
– 500 ಕೋಟಿ ರೂ. ವೆಚ್ಚದ ಎಲ್ ಪಿಜಿ ಸ್ಟೋರೇಜ್ ವ್ಯವಸ್ಥೆ ಘಟಕಕ್ಕೆ ಮೋದಿ ಚಾಲನೆ


Spread the love

About Laxminews 24x7

Check Also

ವಿದೇಶಿ ಪ್ರಜೆಗಳಿಂದ ಮಾದಕ ದ್ರವ್ಯಗಳನ್ನ ಜಪ್ತಿ

Spread the loveಬೆಂಗಳೂರು : ಮಿಂಚಿನ ಕಾರ್ಯಾಚರಣೆ ನಡೆಸಿರುವ ರಾಜಾನುಕುಂಟೆ ಪೊಲೀಸರು ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸುವ ಮೂಲಕ ಡ್ರಗ್ಸ್ ಜಾಲವನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ