ಚಿತ್ರದುರ್ಗ: ಪೋಕ್ಸೋ ಪ್ರಕರಣ ಸಂಬಂಧ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರನ್ನು ನ್ಯಾಯಾಲಯಕ್ಕೆ ಕರೆದುಕೊಂಡು ಬರುವಂತೆ ಜಿಲ್ಲಾ ಸೆಷನ್ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರು ಸೂಚಿಸಿದ್ದು, ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ
ಈಗಾಗಲೇ ಶ್ರೀಗಳನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನ್ಯಾಯಾಲಯವು ಒಪ್ಪಿಸಿದೆ. ನಂತರ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಚಿಕಿತ್ಸೆಗೆ ಒಳಪಡಿಸಲಾಗಿದ್ದು, ಐಸಿಯು ಘಟಕದಲ್ಲಿ ದಾಖಲಿಸಲಾಗಿದೆ. ಇದೀಗ ಮುರುಘಾ ಶರಣರು ಆಸ್ಪತ್ರೆಯಿಂದ ನೇರವಾಗಿ ನ್ಯಾಯಾಲಯಕ್ಕೆ ಬರುವಂತೆ ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಸೂಚನೆ ನೀಡಿದ್ದರು.