Breaking News

ಮಂಗಳೂರಿನಲ್ಲಿ 3800 ಕೋಟಿ ರೂ. ವಿವಿಧ ಯೋಜನೆಗಳಿಗೆ ಪಿಎಂ ಮೋದಿ ಚಾಲನೆ

Spread the love

ಆಯುμÁ್ಮನ್ ಭಾರತ್ ಯೋಜನೆಯಿಂದ ಬಡವರಿಗೆ ಅನುಕೂಲವಾಗಿದೆ. ಸುಮಾರು 4 ಕೋಟಿ ಬಡವರಿಗೆ ಉಚಿತ ಚಿಕಿತ್ಸೆ ದೊರೆತಿದೆ, ಕರ್ನಾಟಕದಲ್ಲೂ 30 ಲಕ್ಷಕ್ಕೂ ಹೆಚ್ಚು ಬಡವರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಮಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ರಾಜ್ಯಪಾಲ ಥಾವರ್‍ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ವಾಗತಿಸಿದರು.

ನಂತರ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಪ್ರಧಾನಿ ಮೋದಿಗೆ ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ ಸನ್ಮಾನ ಮಾಡಲಾಯಿತು.

ಹಡಗು, ಜಲಸಾರಿಗೆ ಸಚಿವ ಸರ್ಬಾನಂದ್ ಸೋನೊವಾಲ್ ಗೌರವಿಸಿದರು. ಸಿಎಂ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್, ದಕ್ಷಿಣ ಕನ್ನಡ ಸಂಸದ ಕಟೀಲು, ಶಾಸಕ ಭರತ್ ಶೆಟ್ಟಿ ಪ್ರಧಾನಿ ಮೋದಿ ಅವರನ್ನು ಸನ್ಮಾನಿಸಿ ಗೌರವಿಸಿದರು.

ಬೃಹತ್ ಸಮಾವೇಶದಲ್ಲಿ 3800 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ ಮಾತನಾಡಿದರು.

ನೌಕಾ ಕ್ಷೇತ್ರದಲ್ಲಿ ಭಾರತಕ್ಕೆ ಇಂದು ಮಹತ್ವದ ದಿನ, ಹಲವಾರು ಯೋಜನೆಗಳಿಗೆ ಶಿಲಾನ್ಯಾಸ ನೆರವೇರಿಸಿದ್ದೇವೆ. ಮೂಲ ಸೌಕರ್ಯ ಕ್ಷೇತ್ರದಲ್ಲಿ ಕಳೆದ 8 ವರ್ಷಗಳಿಂದ ಅಮೂಲಾಗ್ರ ಬದಲಾವಣೆಯಾಗುತ್ತಿದೆ. ಸಾಗರ್ ಮಾಲಾ ಯೋಜನೆಯಿಂದ ಮತ್ತಷ್ಟು ಶಕ್ತಿ ಲಭ್ಯವಾಗಲಿದೆ. ಸಾಗರ್ ಮಾಲಾ ಯೋಜನೆಯ ಫಲಾನುಭವಿಗಳಾಗಿರುವ ಹಲವು ರಾಜ್ಯಗಳ ಪೈಕಿ ಕರ್ನಾಟಕ ಕೂಡ ಒಂದಾಗಿದ್ದು ಡಬಲ್ ಇಂಜಿನ್ ಸರ್ಕಾರ ಅಭಿವೃದ್ಧಿಯತ್ತ ಮುನ್ನಡೆಯುತ್ತಿದೆ ಎಂದರು.


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ