Breaking News

ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ

Spread the love

ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು. ಅಕ್ರಮವಾಗಿ ಸಾಗವಾನಿ ಸಾಗಿಸುತ್ತಿದ್ದ ವಾಹನ ಮಾಲು ಸಮೇತ ಜಪ್ತಿ ಮಾಡಿದ್ದಾರೆ. ಆರೋಪಿಗಳು ಪರಾರಿಯಾಗಿರುವ ಘಟನೆ ಜೋಯ್ಡಾ ತಾಲೂಕಿನ ಉಸೋಡ ಬಳಿ ನಡೆದಿದೆ.

ಹೌದು GA 07 C 9384 ನಂಬರಿನ ಸಫಾರಿ ವಾಹನದಲ್ಲಿ ಅಕ್ರಮವಾಗಿ ಸಾಗವಾನಿ ಮರದ ತುಂಡುಗಳನ್ನು ಸಾಗಿಸಲಾಗುತ್ತಿತ್ತು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ದಾಂಡೇಲಿ ಅರಣ್ಯ ಇಲಾಖೆ ಅಧಿಕಾರಿಗಳು ಮಾಲು ಸಮೇತ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ವೇಳೆ ಆರೋಪಿಗಳು ಅಲ್ಲಿಂದ ತಪ್ಪಿಸಿಕೊಂಡು ಹೋಗಿದ್ದಾರೆ. ಆರೋಪಿಗಳಿಗಾಗಿ ಅರಣ್ಯ ಇಲಾಖೆ ಶೋಧ ನಡೆಸುತ್ತಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್.ಸಿ.ಬಾಲಚಂದ್ರ ಅವರ ಮಾರ್ಗದರ್ಶನದಲ್ಲಿ ನಡೆದ .

ಈ ಕಾರ್ಯಾಚರಣೆಯಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಎಸ್.ನಿಂಗಾಣಿ, ಅಪ್ಪಾರಾವ್ ಕಲಶೆಟ್ಟಿ, ಅನಿಲ್ ಆಚರಟ್ಟಿ, ಸಂದೀಪ್ ನಾಯ್ಕ್ ಸೇರಿ ಇನ್ನಿತರರು ಭಾಗಿಯಾಗಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ