Breaking News

ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ನಟ ಸುದೀಪ್: ಪ್ರಭು ಚವ್ಹಾಣ್

Spread the love

ಬೆಂಗಳೂರು: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ಯೋಜನೆಯ ರಾಯಭಾರಿಯಾಗಿ ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ನೇಮಿಸಲಾಗಿದೆ ಎಂದು ಪಶು ಸಂಗೋಪನೆ ಸಚಿವ ಪ್ರಭು ಬಿ.ಚವ್ಹಾಣ್ ತಿಳಿಸಿದ್ದಾರೆ.

 

ಈ ಕುರಿತು ಕಿಚ್ಚ ಸುದೀಪ್ ಅವರಿಗೆ ಪತ್ರ ಬರೆದಿರುವ ಪ್ರಭು ಚವ್ಹಾಣ್, ತಾವು ಈ ಸತ್ಕಾರ್ಯದಲ್ಲಿ ಭಾಗಿಯಾಗಿ ಗೋ ಸಂಪತ್ತಿನ ಸಂರಕ್ಷಣೆಗೆ ಸರ್ಕಾರ ತೊಟ್ಟಿರುವ ಸಂಕಲ್ಪಕ್ಕೆ ಕೈ ಜೋಡಿಸಿ, ಗೋಮಾತಾ ರಕ್ಷಣೆಯಲ್ಲಿ ನಾವೆಲ್ಲರೂ ಭಾಗಿಯಾಗೋಣ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಶು ಸಂಗೋಪನೆ ಇಲಾಖೆಯು ಜಾನುವಾರುಗಳ ರಕ್ಷಣೆಗಾಗಿ ಕೈಗೊಂಡಿರುವ ಕಾರ್ಯಕ್ರಮಗಳನ್ನು ಪ್ರಚುರಪಡಿಸಿ, ಹೈನುಗಾರಿಕೆಗೆ ಉತ್ತೇಜನ ನೀಡಿ, ಜಾನುವಾರುಗಳ ಸಂರಕ್ಷಣೆ, ಪಾಲನೆ, ಪೋಷಣೆ ಮಾಡುತ್ತಿರುವ ಸರ್ಕಾರದೊಂದಿಗೆ ಕೈಜೋಡಿಸಿ, ಸಾರ್ವಜನಿಕರಲ್ಲಿ ಸ್ಫೂರ್ತಿ ತುಂಬಲು ತಮ್ಮನ್ನು ತಮ್ಮ ಜನ್ಮದಿನದ ಈ ಶುಭ ಸಂದರ್ಭದಲ್ಲಿ ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಪುಣ್ಯಕೋಟಿ ದತ್ತು ಯೋಜನೆಯ ರಾಯಭಾರಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ತಿಳಿಸಲು ಹರ್ಷಿಸುತ್ತೇನೆ ಎಂದು ಪತ್ರ ಬರೆದಿದ್ದಾರೆ.

ಪಶು ಸಂಗೋಪನೆ ಇಲಾಖೆಯ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಲಾಗಿದೆ. ಸುದೀಪ್ ಅವರು ಯಾವುದೇ ಸಂಭಾವನೆ ಇಲ್ಲದೆ ಈ ಕೆಲಸವನ್ನು ನಿರ್ವಹಿಸುವುದಾಗಿ ಒಪ್ಪಿಕೊಂಡಿದ್ದಾರೆ ಪ್ರಭು ಚವ್ಹಾಣ್ ಮಾಹಿತಿ ಹಂಚಿಕೊಂಡಿದ್ದಾರೆ.

ಈ ಹಿಂದೆ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಅವರು ನಟ ಸುದೀಪ್‌ ಅವರಿಗೆ ಪತ್ರ ಬರೆದು, ಪುಣ್ಯಕೋಟಿ ರಾಯಭಾರಿಯಾಗುವಂತೆ ಕೋರಿದ್ದರು. ಈ ಹಿನ್ನೆಲೆಯಲ್ಲಿ ನಟ ಸುದೀಪ್‌ ಪಶು ಸಂಗೋಪನೆ ಇಲಾಖೆಯ ರಾಯಭಾರಿ ಕೆಲಸ ನಿರ್ವಹಿಸಲು ಒಪ್ಪಿಕೊಂಡಿದ್ದಾರೆ. ಇಂದು ಅವರ ಜನ್ಮದಿನದ ಅಂಗವಾಗಿ ಪುಣ್ಯಕೋಟಿ ರಾಯಭಾರಿಯಾಗಿ ನೇಮಕ ಮಾಡಿರುವ ಕುರಿತು ಅಧಿಕೃತವಾಗಿ ಪತ್ರ ಬರೆಯಲಾಗಿದೆ. ಸುದೀಪ್ ಈ ಕೆಲಸಕ್ಕ ಯಾವುದೇ ಸಂಭಾವನೆ ಪಡೆಯದೇ ಗೋಸಂಪತ್ತಿನ ಸಂರಕ್ಷಣೆಗೆ ತಮ್ಮ ಸಣ್ಣದೊಂದು ಅಳಿಲು ಸೇವೆ ಸಲ್ಲಿಸುವುದಾಗಿ ತಿಳಿಸಿರುವುದಾಗಿ ಪ್ರಭು ಚವ್ಹಾಣ್ ವಿವರಿಸಿ, ಜನ್ಮದಿನಕ್ಕೆ ಶುಭ ಕೋರಿದ್ದಾರೆ.

 


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ