ಬೆಂಗಳೂರು: ಬೆಂಗಳೂರಿನ ವಿವಿಧ ಪ್ರದೇಶಗಳ ಮಳೆ ಹಾನಿ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಗೆ ಅವಾಜ್ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಅದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಆಗಿದೆ.
ವರ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. ಸುರಿದ ಭಾರೀ ಮಳೆಯಿಂದಾಗಿ ಮಹದೇವಪುರ ಕ್ಷೇತ್ರದ ಹಲವೆಡೆ ಪ್ರವಾಹ ಉಂಟಾಗಿತ್ತು. ಪ್ರವಾಹ ಪೀಡಿತ ಪ್ರದೇಶ ಪರಿವೀಕ್ಷಣೆಗೆ ಸ್ಥಳೀಯ ಶಾಸಕ ಅರವಿಂದ ಲಿಂಬಾವಳಿ ಭೇಟಿ ನೀಡಿದ್ದರು. ಮಳೆ ಅನಾಹುತ ಪ್ರದೇಶವಾದ ವರ್ತೂರು ಕೆರೆ ಕೋಡಿ ವೀಕ್ಷಣೆ ಮಾಡುತ್ತಿದ್ದ ವೇಳೆ ಮಹಿಳೆಯೋರ್ವರು ಮನವಿ ಸಲ್ಲಿಸಲು ಆಗಮಿಸಿದ್ದರು. ಈ ವೇಳೆ ಮಹಿಳೆಯೊಂದಿಗೆ ಶಾಸಕ ಲಿಂಬಾವಳಿ ವಾಗ್ವಾದ ನಡೆಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಮನವಿ ಪತ್ರವವನ್ನು ಕಸಿದುಕೊಳ್ಳಲು ಹೋಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಒತ್ತುವರಿ ಮಾಡಿಕೊಂಡು ಈಗ ನ್ಯಾಯ ಕೇಳಲು ಬರ್ತೀಯಾ. ಮಾನ ಮರ್ಯಾದೆ, ನಾಚಿಕೆ ಏನೂ ಇಲ್ವಾ. ಇನ್ನು ಬೇರೆ ಭಾಷೆ ಬರುತ್ತೆ. ಮರ್ಯಾದೆ ಬೇರೆ ಕೊಡಬೇಕಾ? ಎಂದು ಹೇಳಿರುವುದು ವಿಡಿಯೋದಲ್ಲಿದೆ. ಬಳಿಕ ಪೊಲೀಸರನ್ನು ಕರೆಯಿಸಿ ಮಹಿಳೆಯನ್ನು ಠಾಣೆಗೆ ಕರೆದೊಯ್ಯಲು ಸೂಚಿಸಿದ್ದಾರೆ