Breaking News

ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ

Spread the love

ಬೆಳಗಾವಿ: ಜಿಲ್ಲೆಯ ಉತ್ತರ ಕ್ಷೇತ್ರದಲ್ಲಿ ವಿವಿಧ ಗಣೇಶ ಮಂಟಪಗಳಿಗೆ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ.

ಸ್ಥಳೀಯ ಬಿಜೆಪಿ ನಾಯಕ, ಬೆಳಗಾವಿ ಮಹಾನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಘೇಂದ್ರಗೌಡ ಪಾಟೀಲ್ ನೇತೃತ್ವದಲ್ಲಿ ವೀರ್ ಸಾವರ್ಕರ್ ಭಾವಚಿತ್ರ ವಿತರಣೆ ಮಾಡಲಾಗುತ್ತಿದೆ. ಈ ಬಾರಿ ಗಣೇಶೋತ್ಸವ ವೀರ್ ಸಾವರ್ಕರ್ ಗಣೇಶೋತ್ಸವವನ್ನಾಗಿ ಆಚರಿಸಲು ಕರೆ ನೀಡಲಾಗಿದೆ. ಬೆಳಗಾವಿ ನಗರದ ವಿವಿಧ ಬಡಾವಣೆಗಳಲ್ಲಿ ಒಟ್ಟು 378 ಸಾರ್ವಜನಿಕ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡಲಾಗುತ್ತಿದೆ.

ಗಣೇಶ ಪ್ರತಿಷ್ಠಾಪನೆಗೂ ಮುನ್ನವೇ ಮಂಟಪಗಳಿಗೆ ತೆರಳಿ ಸಾವರ್ಕರ್ ಭಾವಚಿತ್ರ ವಿತರಿಸಲಾಗಿದೆ. ಇಂದು ರಾತ್ರಿ ವೇಳೆ ಬೆಳಗಾವಿಯ ವಿವಿಧ ಬಡಾವಣೆಗಳಲ್ಲಿ 378 ಗಣೇಶ ವಿಗ್ರಹಗಳು ಪ್ರತಿಷ್ಠಾಪನೆಗೊಳ್ಳಲಿವೆ. ಕೋವಿಡ್ ಹಿನ್ನೆಲೆ ಎರಡು ವರ್ಷ ಅದ್ಧೂರಿ ಗಣೇಶೋತ್ಸವಕ್ಕೆ ಬ್ರೇಕ್ ಬಿದ್ದಿತ್ತು. ಈ ಬಾರಿ ಗಣೇಶೋತ್ಸವ ಸಾವರ್ಕರ್ ಗಣೇಶ ಉತ್ಸವವನ್ನಾಗಿ ಆಚರಿಸಲು ಹಿಂದೂಪರ ಸಂಘಟನೆಗಳು ನಿರ್ಧರಿಸಿವೆ.


Spread the love

About Laxminews 24x7

Check Also

ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ ಭವನದಲ್ಲಿ ಆಯೋಜಿಸಲಾದ “ಬಿಲ್ಡ್ ಟೆಕ್ – 2025” ಕಟ್ಟಡ ನಿರ್ಮಾಣ

Spread the love ಗೋಕಾಕ ನಗರದ ಇತಿಹಾಸದಲ್ಲೇ ಪ್ರಥಮ ಬಾರಿಗೆ, ಗೋಕಾಕ ಇಂಜಿನಿಯರ್ಸ್ ಅಸೋಸಿಯೇಷನ್‌ ಅವರ ವತಿಯಿಂದ ಶ್ರೀ ಮಹಾಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ