ಚಿತ್ರದುರ್ಗ : ಫೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀಗಳಿಗೆ ಮತ್ತೊಂದು ಕಂಟಕ ಎದುರಾಗಿದ್ದು, ಲೈಂಗಿಕ ದೌರ್ಜನ್ಯ ಮೆಡಿಕಲ್ ಟೆಸ್ಟ್ ರಿಪೋರ್ಟ್ ಬಹಿರಂಗವಾಗಿದೆ.
ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ ನೀಡಿದ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು 2 ನೇ ಅಪರ ಜಿಲ್ಲಾ ಕೋರ್ಟ್ ಎದುರು ಶುಕ್ರವಾರ ಹಾಜರುಪಡಿಸಲಾಗಿದ್ದು, ಸೆ. 5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ನಿನ್ನೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ ಬೆನ್ನಲ್ಲೇ ಪೊಲೀಸರು ಜಿಲ್ಲಾಸ್ಪತ್ರೆಯಲ್ಲಿ ಶ್ರೀಗಳನ್ನು ವೈದ್ಯಕೀಯ ಟೆಸ್ಟ್ ಮಾಡಿದ್ದಾರೆ. ಪುರುಷತ್ವ ಪರೀಕ್ಷೆಯಲ್ಲಿ ವೈದ್ಯರು ತಿಳಿಸಿದ ವರದಿಗಳಲ್ಲಿ ಶ್ರೀಗಳು ಫಿಟ್ ಆಗಿದ್ದಾರೆ ಎಂಬ ಮಾಹಿತಿ ಬಹಿರಂಗವಾಗಿದೆ. ಈಗಾಗಲೇ ಎಫ್ ಎಸ್‌ಎಲ್ ಪರೀಕ್ಷೆಗಾಗಿ ಕೂದಲು, ರಕ್ತ, ಉಗುರಿನ ಮಾದರಿಗಳನ್ನು ಕಳುಹಿಸಲಾಗಿದೆ.
Laxmi News 24×7