Breaking News

ಪೊಲೀಸ್‌ ನೇಮಕಾತಿ ವಯೋಮಿತಿ ಹೆಚ್ಚಿಸಲು ಆಗ್ರಹ

Spread the love

ರಾಯಚೂರು: ಪೊಲೀಸ್‌ ನೇಮಕಾತಿಯಲ್ಲಿ ವಯೋಮಿತಿ ಹೆಚ್ಚಿಸಬೇಕು, ಖಾಲಿ ಇರುವ ಎಲ್ಲ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಅಖೀಲ ಭಾರತ ನಿರುದ್ಯೋಗ ಯುವಜನರ ಹೋರಾಟ ಸಮಿತಿ ಸದಸ್ಯರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಕುರಿತು ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಒಂದೆಡೆ ಪದವೀಧರರು ಡಿಗ್ರಿಗಳನ್ನು ಪಡೆದು ಸಣ್ಣ ಪುಟ್ಟ ಕೆಲಸ ಮಾಡುವ ಪರಿಸ್ಥಿತಿ ಇದೆ. ಅಲ್ಲದೇ, ಕೋವಿಡ್‌ -19 ಪರಿಸ್ಥಿತಿಯಲ್ಲಿ, ಉದ್ಯೋಗ ಕಳೆದುಕೊಂಡು ಯುವಕರು ಕಂಗಾಲಾಗಿದ್ದಾರೆ. ಆದರೆ, ಸರ್ಕಾರಿ ಇಲಾಖೆಗಳಲ್ಲಿ ಲಕ್ಷಾಂತರ ಹುದ್ದೆಗಳು ಖಾಲಿ ಇದ್ದರೂ ಸರ್ಕಾರ ಅವುಗಳ ಭರ್ತಿಗೆ ಮುಂದಾಗುತ್ತಿಲ್ಲ ಎಂದರು.

ರಾಜ್ಯ ಸರ್ಕಾರ ಪೊಲೀಸ್‌ ನೇಮಕಾತಿಗೆ ನಿಗದಿಪಡಿಸಿರುವ ವಯೋಮಿತಿ ಕಡಿಮೆ ಇದೆ. ಅದರಲ್ಲೂ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ, ತಮಿಳುನಾಡು, ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಪೊಲೀಸ್‌ ನೇಮಕಾತಿಯ ಗರಿಷ್ಠ ವಯೋಮಿತಿ 30-35 ವರ್ಷಗಳಿದ್ದರೆ, ನಮ್ಮ ರಾಜ್ಯದಲ್ಲಿ 25-27 ವರ್ಷಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ. ಇದರಿಂದ ರಾಜ್ಯದ ಯುವಕರಿಗೆ ಅನ್ಯಾಯವಾಗುತ್ತಿದೆ ಎಂದರು.

ಕೋವಿಡ್‌ ಕಾರಣದಿಂದ ಪಿಎಸ್‌ಐ ನೇಮಕಾತಿಗೆ ಗರಿಷ್ಠ ವಯೋಮಿತಿ ಹೆಚ್ಚಿಸಿದಂತೆ ಪೊಲೀಸ್‌ ನೇಮಕಾತಿಯಲ್ಲೂ ಕನಿಷ್ಠ 3-4 ವರ್ಷ ವಯೋಮಿತಿ ಹೆಚ್ಚಿಸಬೇಕು. ಖಾಲಿ ಇರುವ ಎಲ್ಲ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಒತ್ತಾಯಿಸಿದರು.


Spread the love

About Laxminews 24x7

Check Also

ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ

Spread the love ವಿಶ್ವಪ್ರಸಿದ್ಧ ಮೈಸೂರು ದಸರಾ ಉದ್ಘಾಟನೆಯಲ್ಲಿ ಬಾನು ಮುಷ್ತಾಕ್‌ ಅವರಿಂದ ಶೋಭೆಯ ಸಂದೇಶ ಮೈಸೂರು: ಕನ್ನಡಕ್ಕೆ ಮೊದಲ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ