Breaking News

ಬೆಂಗಳೂರಲ್ಲಿ ಬಸ್ ಚಾಲಕನ ಮೇಲೆ ಟ್ರಾಫಿಕ್ ಸಿಬ್ಬಂದಿ ಹಲ್ಲೆ: ದೂರು ದಾಖಲು

Spread the love

ಬೆಂಗಳೂರು: ಕೆಎಸ್​ಆರ್​ಟಿಸಿ ಬಸ್ ಚಾಲಕನ ಮೇಲೆ ಟ್ರಾಫಿಕ್ ಪೊಲೀಸ್ ಹಲ್ಲೆ ನಡೆಸಿರುವ ಪ್ರಕರಣ ಶನಿವಾರ ತಡರಾತ್ರಿ ನಗರದ ಕಾರ್ಪೊರೇಷನ್ ಬಸ್ ನಿಲ್ದಾಣದ ಬಳಿ ಘಟನೆ ಸಂಭವಿಸಿದೆ.

ರಾತ್ರಿ 11 ಗಂಟೆ ಸುಮಾರಿಗೆ ಕಾರ್ಪೊರೇಷನ್ ಬಳಿ ಸಾಗರದಿಂದ ತಿರುವಣ್ಣಾಮಲೈಗೆ ಹೋಗುತ್ತಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಡ್ರೈವರ್ ಪ್ರಕಾಶ್, ಟಿಕೆಟ್ ಕಾಯ್ದಿರಿಸಿದ್ದ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಕಾರ್ಪೋರೇಷನ್ ಬಳಿ ಬಸ್ ನಿಲ್ಲಿಸಿದ್ದರು. ಈ ವೇಳೆ ಹಿಂದೆ ಎರಡು ಮೂರು ಬಸ್​​ಗಳು ಬಂದು ನಿಂತಿವೆ. ಕೂಡಲೇ ಬಸ್ ತೆರವುಗೊಳಿಸುವಂತೆ ಟ್ರಾಫಿಕ್ ಸಿಬ್ಬಂದಿ ಆವಾಜ್ ಹಾಕಿದ್ದಾರೆ. ಆದರೆ ಪ್ರಯಾಣಿಕರನ್ನು ಇನ್ನೂ ಬಸ್ ಹತ್ತದ ಕಾರಣ ನಿಲ್ದಾಣದಿಂದ ಚಾಲಕ ಬಸ್ ತೆಗೆದಿರಲಿಲ್ಲ.

ಆಗ ಟ್ರಾಫಿಕ್ ಪೊಲೀಸರು, ಡ್ರೈವಿಂಗ್ ಸೀಟ್ ಮೇಲೆ ಕುಳಿತಿದ್ದ ಡ್ರೈವರ್ ಪ್ರಕಾಶ್ ಮೇಲೆ ಏಕಾಏಕಿ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಹಲ್ಲೆ ನಡೆದ ಪರಿಣಾಮ ಡ್ರೈವರ್ ಪ್ರಕಾಶ್ ಮೂಗಿಗೆ ಗಂಭೀರ ಗಾಯವಾಗಿದೆ. ಪ್ರಕರಣದ ಸಂಬಂಧ ಚಾಲಕ ಪ್ರಕಾಶ್ ಎಸ್.ಜೆ ಪಾರ್ಕ್ ಠಾಣೆಗೆ ದೂರು ನೀಡಿದ್ದು, ತನಿಖೆ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ