ಚಿಕ್ಕೋಡಿ: ಪಂಚಮಸಾಲಿ 2A ಮೀಸಲಾತಿ ಹೋರಾಟಕ್ಕೆ ಸಚಿವ ಉಮೇಶ್ ಕತ್ತಿ ಬೆಂಬಲ ಸೂಚಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರ್ಜುನವಾಡ ಗ್ರಾಮದಲ್ಲಿ ನಡೆದ ಪಂಚಮಸಾಲಿ ಹೋರಾಟದ ಪಾದಯಾತ್ರೆಯಲ್ಲಿ ಭಾಗವಹಿಸಿದ ಸಚಿವರು ಪಂಚಮಸಾಲಿ ಹೋರಾಟಕ್ಕೆ ನನ್ನ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ
ಉಮೇಶ್ ಕತ್ತಿ ಬಣಜಿಗ ಸಮುದಾಯಕ್ಕೆ ಸೇರಿದವರಾದರೂ ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ.
ಮೀಸಲಾತಿ ಹೋರಾಟವನ್ನುದ್ದೇಶಿಸಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡಿಸುವ ನಿಟ್ಟಿನಲ್ಲಿ ಎಲ್ಲ ಲಿಂಗಾಯತ ಶಾಸಕರು ಒಂದಾಗಿ ಸಿಎಂ ಮೇಲೆ ಒತ್ತಡ ತರುತ್ತೇವೆ. ನೀವು ನಿಮ್ಮ ಹೋರಾಟ ಮುಂದುವರಿಸಿ, ಆದಷ್ಟು ಬೇಗ ನಿಮಗೆ ನ್ಯಾಯ ಕೊಡಿಸಿ ಎಲ್ಲರೂ ಸೇರಿಸಿ ವಿಜಯೋತ್ಸವ ಮಾಡೋಣ ಎಂದು ಭರವಸೆ ನೀಡಿದ್ದಾರೆ.
Laxmi News 24×7