Breaking News

SC/ST ಸಮುದಾಯಕ್ಕೆ ರಾಜ್ಯ ಸರ್ಕಾರದಿಂದ ‘ಬಿಗ್‌ ಶಾಕ್‌’: ‘ಉಚಿತ ವಿದ್ಯುತ್ ಯೋಜನೆ’ ಆದೇಶ ವಾಪಸ್ಸು

Spread the love

ಬೆಂಗಳೂರು: ರಾಜ್ಯ ಸರ್ಕಾರದಿಂದ ಬಡತನ ರೇಖೆಗಿಂತ ಕೆಳಗಿರುವಂತ ಬಿಪಿಎಲ್ ಪಡಿತರ ಚೀಟಿದಾರ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯುನಿಟ್ ಉಚಿತ ವಿದ್ಯುತ್ ನೀಡೋದಾಗಿ ಘೋಷಣೆ ಮಾಡಿತ್ತು. ಇದೀಗ ಈ ಯೋಜನೆಯನ್ನು ಹಿಂಪಡೆದು, ಬಿಗ್ ಶಾಕ್ ನೀಡಿದೆ.

 

ಈ ಕುರಿತಂತೆ ರಾಜ್ಯ ಸರ್ಕಾರದ ಇಂಧನ ಇಲಾಖೆ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ ಬಿಪಿಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ಕುಟುಂಬಗಳ ಗೃಹ ವಿದ್ಯುತ್ ಬಳಕೆದಾರರಿಗೆ ಭಾಗ್ಯಜ್ಯೋತಿ, ಕುಟೀರಜ್ಯೋತಿ ಒಳಗೊಂಡಂತೆ 75 ಯುನಿಟ್ ಮಾಸಿಕ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗಿತ್ತು ಎಂದಿದ್ದಾರೆ.

ಈ ಯೋಜನೆಯ ಸಂಬಂಧ ಸರ್ಕಾರದಿಂದ ಹೊರಡಿಸಿದ್ದಂತ ಸುತ್ತೋಲೆಯನ್ನು, ಈ ತಕ್ಷಣದಿಂದ ಜಾರಿಗೆ ಬರುವಂತೆ ಹಿಂಪಡೆಯಲಾಗಿದೆ ಎಂಬುದಾಗಿ ಆದೇಶಿಸಿದ್ದಾರೆ. ಈ ಮೂಲಕ 75 ಯುನಿಟ್ ಉಚಿತ ವಿದ್ಯುತ್ ಯೋಜನೆಯನ್ನು ರಾಜ್ಯ ಸರ್ಕಾರ ಹಿಂಪಡೆದು, ಎಸ್ಸಿ, ಎಸ್ಟಿ ಸಮುದಾಯದವರಿಗೆ ಬಿಗ್ ಶಾಕ್ ನೀಡಿದೆ.

ವರದಿ: ವಸಂತ ಬಿ ಈಶ್ವರಗೆರೆ


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ