Breaking News

ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ ಬಂಧನ

Spread the love

ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮರುಘಾಮಠದ ಶ್ರೀಗಳಿಗೆ 9 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಆದೇಶ ನೀಡಿದೆ.

ಪೋಕ್ಸೋ ಪ್ರಕರಣದಲ್ಲಿ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಪೊಲೀಸ್ ಕಸ್ಟಡಿ ಇಂದು ಮುಕ್ತಾಯವಾಗಿದ್ದು, ಪೊಲೀಸರು ಇಂದು ಶ್ರೀಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಚಿತ್ರದುರ್ಗದ 2 ನೇ ಹೆಚ್ಚುವರಿ ನ್ಯಾಯಾಲಯ ಮುರುಘಾಶ್ರೀಗಳಿಗೆ ಸೆಪ್ಟೆಂಬರ್ 14 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಕೆಲವೇ ಹೊತ್ತಿನಲ್ಲಿ ಮುರುಘಾಶ್ರೀಗಳಿಗೆ ಜೈಲಿಗೆ ಸ್ಥಳಾಂತರಿಸಲಾಗುತ್ತಿದೆ. ಹೀಗಾಗಿ ಚಿತ್ರದುರ್ಗದ ಜಿಲ್ಲಾ ಕಾರಾಗೃಹದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಜೈಲಿನ ಮುಂಭಾಗ ಬ್ಯಾರಿಕೇಡ್ ಅಳವಡಿಸಲಾಗಿದೆ. ಸ್ಥಳೀಯ ಪೊಲೀಸರು ಸೇರಿದಂತೆ ಕೆಎಸ್ ಆರ್ ಪಿ ತುಕಡಿ ನಿಯೋಜನೆ ಮಾಡಲಾಗಿದೆ.


Spread the love

About Laxminews 24x7

Check Also

ಡಿಸಿ, ಎಡಿಸಿ ಸಹಿ ದುರುಪಯೋಗ ಮಾಡಿ 15 ಲಕ್ಷದ ನಕಲಿ ಬಿಲ್ ಸೃಷ್ಟಿ – ಐವರು ಅರೆಸ್ಟ್

Spread the loveಚಿತ್ರದುರ್ಗ: ಜಿಲ್ಲಾಧಿಕಾರಿ ಹಾಗೂ ಎಡಿಸಿಯವರ ಡಿಜಿಟಲ್ ಸಹಿ ದುರುಪಯೋಗಪಡಿಸಿಕೊಂಡು 15 ಲಕ್ಷ ರೂ. ಮೌಲ್ಯದ ನಕಲಿ ಬಿಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ