Breaking News

ಬೆಂಗಳೂರಿನಲ್ಲಿ ಮತ್ತೆ ಶುರುವಾದ ಭಾರೀ ಮಳೆ, 2 ಗಂಟೆ ನಿರಂತರ ಸುರಿದ್ರೆ ಅನಾಹುತ ಫಿಕ್ಸ್

Spread the love

ಬೆಂಗಳೂರಿನಲ್ಲಿ ಕಳೆದ ರಾತ್ರಿ ಸುರಿದ ಮಳೆಗೆ ಇನ್ನೂ ಚೇತರಿಸಿಕೊಳ್ಳೋದಕ್ಕೆ ಆಗ್ತಿಲ್ಲ. ಇದರ ನಡುವೆ ಈಗ ಮತ್ತೆ ಬೆಂಗಳೂರಿನಲ್ಲಿ (Bengaluru) ಭಾರೀ ಮಳೆ (Heavy Rain) ಶುರುವಾಗಿದೆ. ಮತ್ತಿಕೆರೆ, ಕಾರ್ಪೊರೇಷನ್, ಯಶವಂತಪುರ, ಬಿಇಎಲ್ ಸರ್ಕಲ್, ಗೊರಗುಂಟೆಪಾಳ್ಯ ಸೇರಿದಂತೆ ಹಲವೆಡೆ ಮಳೆ ಆರಂಭವಾಗಿದೆ.

ತಗ್ಗುಪ್ರದೇಶದಲ್ಲಿರುವ (Down Area) ಜನರಿಗೆ ಹಾಗೂ ರಾಜಕಾಲುವೆ ಪಕ್ಕದಲ್ಲಿರುವ ಜನರಿಗೆ ಮತ್ತೆ ಆತಂಕ ಶುರುವಾಗಿದೆ. ಅದರಲ್ಲೂ ಆಫೀಸ್​ (Office) ಬಿಡೋ ಟೈಮ್ ಆಗಿರೋದ್ರಿಂದ ವಾಹನ ಸವಾರರಿಗೆ (Vehicle ) ಕಿರಿಕಿರಿ ಆಗಿದೆ. ಮಳೆಯಲ್ಲಿ ಸಿಲುಕಿ ವಾಹನ ಸವಾರರು ಪರದಾಡುತ್ತಿದ್ದಾರೆ. ನಿನ್ನೆ ಸುರಿದ ಧಾರಾಕಾರ ಮಳೆಯ ನೀರು ಇನ್ನೂ ತಗ್ಗಿಲ್ಲ. ಇಂದು ಮತ್ತೆ ನಿರಂತರವಾಗಿ 2 ಗಂಟೆ ಮಳೆ ಸುರಿದ್ರೆ ಮತ್ತಷ್ಟು ಅನಾಹುತ ಫಿಕ್ಸ್​​ ಎನ್ನುವಂತಾಗಿದೆ.

ಬೆಂಗಳೂರಿನಲ್ಲಿ ಸಂಜೆ ಆಗ್ತಿದ್ದಂತೆ ಮತ್ತೆ ಮಳೆ ಆರಂಭವಾಗಿದೆ. ಪ್ರಮುಖ ಏರಿಯಾಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ. ಕಾರ್ಪೋರೇಷನ್, ವಿಧಾನಸೌಧ, ಲಾಲ್ ಬಾಗ್, ಟೌನ್ ಹಾಲ್, ಮಾರ್ಕೆಟ್ ಸುತ್ತಲೂ ಮಳೆಯಾಗ್ತಿದೆ. ವಾಹನ ಸವಾರರು ಮಳೆಗೆ ಪರದಾಡುತ್ತಿದ್ದಾರೆ.

ಮಳೆ ಹಿನ್ನೆಲೆ ಸಿಎಂ ಬೊಮ್ಮಾಯಿ ತುರ್ತು ಸಭೆ
ಬೆಂಗಳೂರಿನಲ್ಲಿ ಮಳೆಯಿಂದಾಗಿ ಅವಾಂತರ ಹಿನ್ನೆಲೆ ಬೆಂಗಳೂರು ಸಚಿವರ ಜೊತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸ್ತಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಭೆ ಮಾಡ್ತಿದ್ದಾರೆ. ಸಭೆಯಲ್ಲಿ ಸಚಿವ ವಿ. ಸೋಮಣ್ಣ, ಆರ್. ಅಶೋಕ್, ಬೈರತಿ ಬಸವರಾಜ್, ಬಿಬಿಎಂಪಿ ಕಮಿಷನರ್ ಹಾಗೂ ಬಿಬಿಎಂಪಿ ಅಧಿಕಾರಿಗಳು ಭಾಗಿಯಾಗಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ