Breaking News

ಬೆಳಗಾವಿ: ಹೈ ವೋಲ್ಟೇಜ್​​ ವಿದ್ಯುತ್​​ ತಂತಿ ಸ್ಪರ್ಶಿಸಿ ಇಬ್ಬರು ದುರ್ಮರಣ

Spread the love

ಬೆಳಗಾವಿ: ಹೈ ವೋಲ್ಟೇಜ್​​ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ನಡೆಯಿತು. ಗ್ರಾಮದ ವಿನಾಯಕ್ ಕಲ್ಕಾಂಬಕರ್ (24), ಗೋಪಾಲ್ ಅಗಸಗೇಕರ್ (52) ಮೃತರು. ಮತ್ತೋರ್ವನಿಗೆ ಗಂಭೀರ ಗಾಯವಾಗಿವೆ. ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.

ಮನೆಯ ಮೇಲೆ ಸ್ಟೀಲ್​​ಶೀಟ್ ಅಳವಡಿಸುವಾಗ ವಿದ್ಯುತ್ ತಂತಿ ಸ್ಪರ್ಶಿಸಿ ದುರ್ಘಟನೆ ಸಂಭವಿಸಿದೆ. ಹೆಸ್ಕಾಂ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಬಜೆಟ್‌ನಲ್ಲಿ ಲೋಕೋಪಯೋಗಿ ಇಲಾಖೆಗೆ ಹೆಚ್ಚಿನ ಹಣ ನೀಡಿಲ್ಲ : ಸಚಿವ ಸತೀಶ್‌ ಜಾರಕಿಹೊಳಿ

Spread the loveಬೆಂಗಳೂರು: ಸೇತುವೆಗಳ ನಿರ್ಮಾಣ ಹಾಗೂ ಇತರ ಕಾಮಗಾರಿಗಳನ್ನು ಒಳಗೊಂಡು ಲೋಕೋಪಯೋಗಿ ಇಲಾಖೆಗೆ ಬಜೆಟ್‌ನಲ್ಲಿ ಹೆಚ್ಚಿನ ಹಣ ನೀಡಿರುವುದರಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ