ಬೆಂಗಳೂರು(ಸೆ.06): ಸಚಿವ ಉಮೇಶ್ ಕತ್ತಿ(61) ಹೃದಯಾಘಾತದಿಂದ ನಿಧನರಾಗಿದ್ದಾರೆ. ಇಂದು(ಮಂಗಳವಾರ) ರಾತ್ರಿ ನಗರದ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಉಮೇಶ್ ಕತ್ತಿ ಅವರಿಗೆ ಹೃದಯಾಘಾತವಾಗಿದ್ದರಿಂದ ತಕ್ಷಣ ಅವರನ್ನ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಉಮೇಶ್ ಕತ್ತಿ ನಿಧನರಾಗಿದ್ದಾರೆ.
