Breaking News

ಶಿಕ್ಷಕರ ಹಾಜರಾತಿಗೆ ಬಯೋಮೆಟ್ರಿಕ್‌ ಕಡ್ಡಾಯ; 15 ನಿಮಿಷ ಬೇಗ ಶಾಲೆಗೆ ಬರುವಂತೆ ಸೂಚನೆ

Spread the love

ಬೆಂಗಳೂರು: ನಿಗದಿತ ಸಮಯಕ್ಕೆ ಸರಿಯಾಗಿ ಶಾಲೆಗೆ ಹಾಜರಾಗದೆ ಕಳ್ಳಾಟವಾಡುವ ಶಿಕ್ಷಕರಿಗೆ ಬಿಸಿ ಮುಟ್ಟಿಸಿರುವ ಶಿಕ್ಷಣ ಇಲಾಖೆ, ಶಾಲೆ ಆರಂಭದ ಸಮಯಕ್ಕಿಂತ 15 ನಿಮಿಷ ಬೇಗ ಬರಬೇಕು ಮತ್ತು ಕಡ್ಡಾಯವಾಗಿ ಬಯೋಮೆಟ್ರಿಕ್‌ ಹಾಜರಾಗಿ ಹಾಕುವಂತೆ ಸೂಚಿಸಿದೆ.

 

ಶಾಲೆಯ ಶೈಕ್ಷಣಿಕ ಮತ್ತು ಆಡಳಿತಾತ್ಮಕ ವಿಚಾರಗಳಲ್ಲಿ ಶಿಕ್ಷಕರ ಅಶಿಸ್ತಿನಿಂದ ಮಕ್ಕಳ ಕಲಿಕಾ ಗುಣಮಟ್ಟದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿವೆ. ಆದ್ದರಿಂದ ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಮತ್ತು ಕಚೇರಿ ಸಿಬ್ಬಂದಿ ವರ್ಗ ನಿಗದಿತ ಅವಧಿಗಿಂತ ಕನಿಷ್ಠ 15 ನಿಮಿಷ ಮುಂಚಿತವಾಗಿ ಕರ್ತವ್ಯಕ್ಕೆ ಹಾಜರಾಗಿ ಪೂರ್ವ ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದೆ.

ಇನ್ನು ರಜೆ ಮೇಲೆ ತೆರಳುವಾಗ ಸಂಬಂಧಪಟ್ಟ ಮೇಲಧಿಕಾರಿಗಳಿಂದ ಪೂರ್ವಾನುಮತಿ ಮಂಜೂರು ಪಡೆದು ತೆರಳಬೇಕು. ವೇತನ ಬಟವಾಡೆ ಅಧಿಕಾರಿಗಳು ತಮ್ಮ ಅಧೀನ ಕಚೇರಿ ಮತ್ತು ಶಾಲೆಗಳ ಬಯೋಮೆಟ್ರಿಕ್‌ ಹಾಜರಾತಿಯನ್ನು ಚೆಕ್‌-ಇನ್‌ ಮತ್ತು ಚೆಕ್‌-ಔಟ್‌ ಹಾರ್ಡ್‌/ಸಾಫ್ಟ್ ದಾಖಲೆಗಳನ್ನು ಪ್ರತಿ ತಿಂಗಳು 25ನೇ ತಾರೀಖೀನೊಳಗೆ ಪಡೆದು ಅದಕ್ಕೆ ಅನುಗುಣವಾಗಿ ವೇತನ ಪಾವತಿಸಲು ತಿಳಿಸಿದೆ.

 


Spread the love

About Laxminews 24x7

Check Also

ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು

Spread the love ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ