Breaking News

ಹೃದಯಾಘಾತದಿಂದ ಬಿಜೆಪಿ ಶಾಸಕ ಅರವಿಂದ್ ಗಿರಿ ನಿಧನ..!

Spread the love

ಕ್ನೋ: ಉತ್ತರ ಪ್ರದೇಶದ ಬಿಜೆಪಿ ಶಾಸಕ ಅರವಿಂದ್ ಗಿರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರವಿಂದ್ ಗಿರಿ ಅವರು ಲಖೀಂಪುರ ಖೇರಿ ಜಿಲ್ಲೆಯ ಗೋಲ ಗೋಕ್ರನಾಥ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು.

ಈ ಕುರಿತಂತೆ ಮಾಹಿತಿ ನೀಡಿರುವ ಲಖೀಂಪುರ ಖೇರಿ ಬಿಜೆಪಿ ಘಟಕ, ಹೃದಯಾಘಾತದ ಬಳಿಕ ಕೂಡಲೇ ಅರವಿಂದ್ ಗಿರಿ ಅವರನ್ನು ಚಿಕಿತ್ಸೆಗಾಗಿ ಲಕ್ನೋಗೆ ಕರೆದೊಯ್ಯುವಾಗ ಸೀತಾಪುರ ಬಳಿ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ

ಅರವಿಂದ್ ಗಿರಿ ಅವರ ಸಾವಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಲಖಿಂಪುರ ಖೇರಿ ಜಿಲ್ಲೆಯ ಗೋಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಗಿರಿ ಅವರ ಸಾವು ದುರದೃಷ್ಟಕರವಾಗಿದೆ. ಮೃತರ ಕುಟುಂಬಸ್ಥರಿಗೆ ನನ್ನ ಸಂತಾಪಗಳು. ಭಗವಾನ್ ಶ್ರೀರಾಮನ ಪಾದದಲ್ಲಿ ಅವರ ಆತ್ಮ ನೆಲೆಸಲಿ ಮತ್ತು ಈ ದುಃಖವನ್ನು ಭರಿಸುವ ಶಕ್ತಿ ಕುಟುಂಬಸ್ಥರಿಗೆ ನೀಡಲಿ. ಇದು ತುಂಬಲಾರದ ನಷ್ಟ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.


Spread the love

About Laxminews 24x7

Check Also

ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!!

Spread the love ಬೆಳಗಾವಿಯಲ್ಲಿ ಮಾಜಿ ಮುಖ್ಯಮಂತ್ರಿ ದಿವಂಗತ ದೇವರಾಜ ಅರಸು ಅವರ 110ನೇ ಜನ್ಮ ದಿನಾಚರಣೆ!! ದೇಶದಲ್ಲಿನ ಎಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ