Breaking News

ಉಮೇಶ್ ಕತ್ತಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

Spread the love

ಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ (61) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ (ಸೆಪ್ಟೆಂಬರ್ 6) ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ.

ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ್ ಕತ್ತಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ತಜ್ಞ ವೈದ್ಯರ ತಂಡದಿಂದ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.

 

ಪ್ರಧಾನಿ ಮೋದಿ ಟ್ವೀಟ್ ಮಾಡಿ, ‘ಉಮೇಶ ಕತ್ತಿ ಜೀ ಅವರು ಕರ್ನಾಟಕದ ಅಭಿವೃದ್ಧಿಗೆ ಉತ್ಕೃಷ್ಟ ಕೊಡುಗೆಗಳನ್ನು ನೀಡಿದ ಅನುಭವಿ ನಾಯಕರಾಗಿದ್ದರು. ಅವರ ನಿಧನದಿಂದ ನೋವಾಗಿದೆ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ಇವೆ. ಓಂ ಶಾಂತಿ’ ಎಂದು ಸಂತಾಪ ಸೂಚಿಸಿದ್ದಾರೆ.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ