Breaking News

ಬಿಎಸ್​​​ವೈ ವಿರುದ್ಧದ ಭ್ರಷ್ಟಾಚಾರ ಕೇಸ್​.. ವಿಚಾರಣೆ ನಡೆಸುವಂತೆ ವಿಶೇಷ ಕೋರ್ಟ್​ಗೆ ಹೈಕೋರ್ಟ್ ನಿರ್ದೇಶನ

Spread the love

ಬೆಂಗಳೂರು: ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಮೇಲೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್​, ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ.

ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಅಂದಿನ ರಾಜ್ಯಪಾಲರು ಒಪ್ಪಿಗೆ ನೀಡಲು ನಿರಾಕರಿಸಿದ್ದರಿಂದ ಇಲ್ಲಿನ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಗುತ್ತಿಗೆ ನೀಡುವುದಕ್ಕೆ ಪ್ರತಿಯಾಗಿ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರು ರಾಮಲಿಂಗಂ ಕನ್‌ಸ್ಟ್ರಕ್ಷನ್ ಕಂಪನಿ ಮತ್ತು ಇತರ ಶೆಲ್ ಕಂಪನಿಗಳಿಂದ ಲಂಚ ಪಡೆದಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ದೂರು ದಾಖಲಿಸಿದ್ದರು. ಆರೋಪದ ಹಿನ್ನೆಲೆ ವಿಶೇಷ ತನಿಖಾ ತಂಡದಿಂದ ತನಿಖೆ ನಡೆಸುವಂತೆ ಅವರು ನ್ಯಾಯಾಲಯದಲ್ಲಿ ಕೋರಿದ್ದರು.

ಏನಿದು ಪ್ರಕರಣ: ಯಡಿಯೂರಪ್ಪ ಹಾಗೂ ಅವರ ಪುತ್ರ ಬಿ ವೈ ವಿಜಯೇಂದ್ರ, ಮೊಮ್ಮಗ ಶಶಿದರ್ ಮರಡಿ, ಅಳಿಯ ಸಂಜಯ್ ಶ್ರೀ, ಚಂದ್ರಕಾಂತ್ ರಾಮಲಿಂಗಂ, ಹಾಲಿ ಬಿಡಿಎ ಅಧ್ಯಕ್ಷ ಹಾಗೂ ಶಾಸಕ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಜಿ ಸಿ ಪ್ರಕಾಶ್, ಕೆ ರವಿ ಮತ್ತು ವಿರೂಪಾಕ್ಷಪ್ಪ ವಿರುದ್ಧ ಕೋರ್ಟ್​ಗೆ ದೂರು ನೀಡಲಾಗಿತ್ತು. ಈ ಸಂಬಂಧದ ಅರ್ಜಿಯನ್ನು ಜುಲೈ 8, 2021 ರಂದು ವಿಚಾರಣೆ ನಡೆಸಿದ್ದ ಸೆಷನ್ಸ್ ನ್ಯಾಯಾಲಯವು ದೂರು ವಜಾಗೊಳಿಸಿತ್ತು. ಕೆಳ ನ್ಯಾಯಾಲಯದ ತೀರ್ಪಿನ ವಿರುದ್ಧ ಅರ್ಜಿದಾರರು ಹೈಕೋರ್ಟ್‌ಗೆ ಮೊರೆ ಹೋಗಿದ್ದರು. ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ವಿಚಾರಣೆ ನಡೆಸಿ ಆದೇಶವನ್ನು ಕಾಯ್ದಿರಿಸಿದ್ದರು.. ಇಂದು ಈ ಬಗ್ಗೆ ತೀರ್ಪು ಪ್ರಕಟಿಸಿದ್ದಾರೆ.


Spread the love

About Laxminews 24x7

Check Also

ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ ತನ್ನ 50ನೇ ಮಾಸಿಕ ಸಭೆಯನ್ನು ಅದ್ಧೂರಿಯಾಗಿ ಆಚರಿಸಿತು..

Spread the love ಲಿಂಗಾಯತ ಬಿಸಿನೆಸ್ ಫೋರಮ್‌ (ಎಲ್‌ಬಿಎಫ್‌) ಉದ್ಯಮಿಗಳು, ವೃತ್ತಿಪರರು ಮತ್ತು ವ್ಯಾಪಾರ ನಾಯಕರ ಸಕ್ರಿಯ ವೇದಿಕೆ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ