Breaking News

ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನಕ್ಕೆ

Spread the love

ಚಿತ್ರದುರ್ಗ: ಮುರುಘಾಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ 2ನೇ ಆರೋಪಿ ವಾರ್ಡನ್ ರಶ್ಮಿಯನ್ನು ನ್ಯಾಯಾಂಗ ಬಂಧನಕ್ಕೆ ವಹಿಸಿ ಚಿತ್ರದುರ್ಗ ಕೋರ್ಟ್ ಆದೇಶ ನೀಡಿದೆ.

ಪೋಕ್ಸೋ ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶ್ರೀ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡನೇ ಆರೋಪಿ ರಶ್ಮಿಯ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಪೊಲೀಸರು ಇಂದು ಚಿತ್ರದುರ್ಗ ಜಿಲ್ಲಾ ಎರಡನೇ ಸತ್ರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿ ರಶ್ಮಿಯನ್ನು ಸೆ.14ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ನೀಡಿದೆ.

ಇದೇ ವೇಳೆ ಇನ್ನಿಬ್ಬರು ಆರೋಪಿಗಳಾದ ಬಸವಾದಿತ್ಯ ಹಾಗೂ ಗಂಗಾಧರ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಕೋರ್ಟ್ ಮುಂದೂಡಿದೆ.


Spread the love

About Laxminews 24x7

Check Also

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

Spread the loveಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ